ಸವಣೂರು : ಸ್ವಾಮಿ ವಿವೇಕಾನಂದ ಜಯಂತಿ

ಸವಣೂರು : ಕಡಬ ತಾಲೂಕಿನ ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನ ಆವರಣದಲ್ಲಿ ನೆಹರು ಯುವ ಕೇಂದ್ರ ಮಂಗಳೂರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ., ಕಡಬ ತಾಲೂಕು ಯುವಜನ ಒಕ್ಕೂಟ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು, ಸವಣೂರು ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು.
ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ  ಸವಣೂರು ಕೆ.ಸೀತಾರಾಮ ರೈ ಅವರು ವಿವೇಕಾನಂದರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಅವರಿಂದ ವಿವೇಕಾನಂದ ಜಯಂತಿ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಶೆಟ್ಟಿ, ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ವಿದ್ಯಾರಶ್ಮಿ ಪದವಿ ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ರೈ, ರಾಜ್ಯ ಯುವ ಸಂಘಗಳ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ವಿವಿಧ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ.ಮಾಮಚ್ಚನ್ ಸವಣೂರು,ಶಿವಪ್ರಸಾದ್ ಆಳ್ವ,ಮೋನಪ್ಪ ಪಟ್ಟೆ, ಬಾಲಕೃಷ್ಣ ಕೆ ಸವಣೂರು, ಪೂರ್ಣಿಮಾ, ಶ್ರೇಯಸ್ ರೈ ಅಲೆಕ್ಕಾಡಿ, ರಂಗನಾಥ್ ಕಾಣಿಯೂರು ಮೊದಲಾದವರು ಉಪಸ್ಥಿತರಿದ್ದರು. ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಕಾರ್ಯಕ್ರಮ ನಿರೂಪಿಸಿ, ಯುವಕ ಮಂಡಲದ ಕಾರ್ಯದರ್ಶಿ ಜಿತಾಕ್ಷ ಜಿ. ವಂದಿಸಿದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.