ಕಾವು ನನ್ಯ ತುಡರ್ ಯುವಕ ಮಂಡಲದ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ-ರಾಷ್ಟ್ರೀಯ ಯುವ ಸಪ್ತಾಹಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಯುವ ಜಾಗೃತಿಗೆ ಸಪ್ತಾಹ ಪೂರಕ-ಕಾವು ಹೇಮನಾಥ ಶೆಟ್ಟಿ

ಕಾವು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ನೇತೃತ್ವದಲ್ಲಿ ನೆಹರು ಯುವ ಕೇಂದ್ರ ಮಂಗಳೂರು, ಅರಿಯಡ್ಕ ಗ್ರಾಮ ಪಂಚಾಯತ್, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ, ಆನಂದಾಶ್ರಮ ಸೇವಾ ಟ್ರಸ್ಟ್, ಕೆ.ವಿ.ಜಿ ದಂತ ಮಹಾವಿದ್ಯಾಲಯ ಸುಳ್ಯ, ಬುಶ್ರಾ ವಿದ್ಯಾಸಂಸ್ಥೆ ಕಾವು, ತುಡರ್ ಮಹಿಳಾ ಮಂಡಲ ನನ್ಯ-ಕಾವು ಇದರ ಸಹಭಾಗಿತ್ವದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ಏಳು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಯುವ ಸಪ್ತಾಹಕ್ಕೆ ಜ.12ರಂದು ಬೆಳಿಗ್ಗೆ ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು. ರಾಷ್ಟ್ರೀಯ ಯುವ ಸಪ್ತಾಹವು ಜ.12ರಿಂದ 18ರವರೆಗೆ ವಿವಿಧ ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ:
ರಾಷ್ಟ್ರೀಯ ಯುವ ಸಪ್ತಾಹದ ಪ್ರಥಮ ದಿನದಂಗವಾಗಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಡೆಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಯುವ ಜಾಗೃತಿಗೆ ಸಪ್ತಾಹ ಪೂರಕ-ಕಾವು ಹೇಮನಾಥ ಶೆಟ್ಟಿ
ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಯುವ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿ ಪ್ರಸ್ತುತ ದಿನದಲ್ಲಿ ಒಂದು ಕಾರ್ಯಕ್ರಮ ಮಾಡುವುದೇ ಕಷ್ಟದ ವಿಚಾರ, ಇಂತಹ ಕಾಲಘಟ್ಟದಲ್ಲಿ ತುಡರ್ ಯುವಕ ಮಂಡಲವು ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯನ್ನು ನಿರಂತರ ಏಳು ದಿನಗಳ ಕಾಲ ವಿವಿಧ ಕಡೆಗಳಲ್ಲಿ ಬೇರೆ ಬೇರೆ ಸೇವಾ ಚಟುವಟಿಕೆಗಳ ಮೂಲಕ ನಡೆಸಲು ಮುಂದಾಗಿರುವುದು ಅದ್ಭುತ ಸಾಧನೆಯಾಗಿದೆ, ಏಳು ದಿನಗಳ ಯುವ ಸಪ್ತಾಹದಲ್ಲಿ ಸಮಾಜಕ್ಕೆ ಅನುಕೂಲವಾಗುವ ಕಾರ್ಯಕ್ರಮದ ಜತೆಗೆ ಯುವಜಾಗೃತಿಗೆ ಸಪ್ತಾಹ ಪೂರಕವಾಗಲಿದೆ ಎಂದು ಶುಭಹಾರೈಸಿದರು.

ಸಭಾಧ್ಯಕ್ಷತೆ ವಹಿಸಿದ್ದ ಕಾವು ಬುಶ್ರಾವಿದ್ಯಾಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಜೀಜ್‌ರವರು ಮಾತನಾಡಿ ಏಳು ದಿನಗಳ ಕಾರ್ಯಕ್ರಮ ಯುವ ಸಪ್ತಾಹವನ್ನು ನಮ್ಮ ಸಂಸ್ಥೆಯಲ್ಲಿ ಉದ್ಘಾಟನೆ ಮಾಡಿ ನಮ್ಮ ಮಕ್ಕಳಿಗೆ ಅನುಕೂಲವಾಗುವ ಉಪನ್ಯಾಸ ಕಾರ್ಯಕ್ರಮ ನಡೆಸಿದುದಕ್ಕೆ ಸಂಸ್ಥೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ. ರಾಜೇಶ್ ಬೆಜ್ಜಂಗಳರವರು ಯುವಜನತೆ ಮತ್ತು ಪ್ರಸ್ತುತ ವಿದ್ಯಮಾನ ವಿಷಯದ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿ ನಾವು ಮತ್ತೊಬ್ಬರನ್ನು ಅನುಕರಣೆ ಬದುಕುವುದಕ್ಕಿಂತ ನಮ್ಮನ್ನು ನಾವೇ ಅನುಸರಿಸಿಕೊಂಡು ಜಾಗೃತರಾದಾಗ ಉತ್ತಮ ಪ್ರಜೆಯಾಗಿ ಬಾಳಲು ಸಾಧ್ಯವಿದೆ, ವಿದ್ಯಾರ್ಥಿ ಮತ್ತು ಯುವ ಸಮುದಾಯದ ಆಧುನಿಕ ವಿದ್ಯಮಾನದಲ್ಲಿ ಬಹಳಷ್ಟು ಎಚ್ಚರಿಕೆಯಿಂದ ಆಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಅರಿಯಡ್ಕ ಗ್ರಾ.ಪಂ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಕಾವು ಬುಶ್ರಾ ವಿದ್ಯಾಸಂಸ್ಥೆಯ ಮುಖ್ಯಗುರು ಅಮರನಾಥರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಪ್ರಮಾಣ ಪತ್ರ ವಿತರಣೆ:
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನಡೆಸಿದ ಕಬ್ ವಿಭಾಗದಲ್ಲಿ ತೃತೀಯ ಚರಣ ಪೂರೈಸಿ ಇತ್ತೀಚೆಗೆ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಡೆದ ಪ್ರಶಸ್ತಿ ಪದಾನ ಸಮಾರಂಭದಲ್ಲಿ ಪ್ರಮಾಣ ಪತ್ರ ಪಡೆದ ಬುಶ್ರಾ ಶಾಲಾ ವಿದ್ಯಾರ್ಥಿಗಳಾದ ಅದ್ವಿಕ್ ಕೆ.ಬಿ, ಅನ್ವಿತ್ ರೈ, ಸುಪ್ರಿತ್‌ರವರಿಗೆ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.

ಚಿತ್ರಕಲಾ ಸ್ಪರ್ಧೆ:
ಯುವ ಸಪ್ತಾಹದ ಅಂಗವಾಗಿ ಬುಶ್ರಾ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ ಭಾವಚಿತ್ರ ಬಿಡಿಸುವ ಚಿತ್ರಕಲಾ ಸ್ಪರ್ಧೆ ನಡೆಸಲಾಯಿತು.

ಕಾವು ತುಡರ್ ಯುವಕ ಮಂಡಲದ ಅಧ್ಯಕ್ಷ ಸುನೀಲ್ ನಿಧಿಮುಂಡರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕಿ ಪ್ರಜ್ಞಾ ಕುಲಾಲ್ ವಂದಿಸಿದರು. ಬುಶ್ರಾ ಶಾಲಾ ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ, ಗೌರವಾಧ್ಯಕ್ಷ ಶೇಷಪ್ಪ ಗೌಡ ಪರನೀರು, ಕಾರ್ಯದರ್ಶಿ ಮೋಹನಚಂದ್ರ ಆಚಾರಿಮೂಲೆ, ಉಪಾಧ್ಯಕ್ಷ ಶ್ರೀಕುಮಾರ್ ಬಲ್ಯಾಯ, ಕೋಶಾಧಿಕಾರಿ ಜಗದೀಶ ನಾಯ್ಕ, ಭಜನಾ ಸಂಘದ ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ, ಕಾರ್ಯದರ್ಶಿ ಧನಂಜಯ ನಾಯ್ಕ, ಸದಸ್ಯರಾದ ಪುರುಷೋತ್ತಮ ಆಚಾರ್ಯ ನನ್ಯ, ಸಂದೇಶ್ ಚಾಕೋಟೆ, ಶಿವಕುಮಾರ್ ಮಾಣಿಯಡ್ಕ, ನಿರಂಜನ ಕಾವು, ರಾಜೇಶ್ ಬಿ, ರಮೇಶ್ ಗೌಡ, ಹರ್ಷ ಎ.ಆರ್, ತುಡರ್ ಮಹಿಳಾ ಮಂಡಲದ ಕಾರ್ಯದರ್ಶಿ ತುಳಸಿ ಪುರುಷೋತ್ತಮ ನನ್ಯ, ಬುಶ್ರಾ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿವೃಂದದವರು ಪಾಲ್ಗೊಂಡಿದ್ದರು.

ಇಂದು ಸಪ್ತಾಹದಲ್ಲಿ
ರಾಷ್ಟ್ರೀಯ ಯುವ ಸಪ್ತಾಹದ ಎರಡನೇ ದಿನವಾದ ಜ.13೩ರಂದು ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯ ಮತ್ತು ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ 1.30ರವರೆಗೆ ಕಾವು ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ.

ಗಮನಸೆಳೆದ ಪುಟಾಣಿ ವಿವೇಕಾನಂದರು:
ರಾಷ್ಟ್ರೀಯ ಯುವ ಸಪ್ತಾಹದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ಬುಶ್ರಾ ಶಾಲೆಯ ಏಳು ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಉಡುಗೆ ಹಾಕಿ ಗಮನ ಸೆಳೆದರು. ಸ್ವಾಮಿ ವಿವೇಕಾನಂದರ ವೇಷ ಧರಿಸಿದ ವಿದ್ಯಾರ್ಥಿಗಳು ಅತಿಥಿಗಳನ್ನು ಸತ್ಕರಿಸಿ, ವೇದಿಕೆಯ ಎಡ ಮತ್ತು ಬಲಭಾಗದಲ್ಲಿ ಕುಳಿತು ವೇದಿಕೆಯಲ್ಲಿ ಗಮನಸೆಳೆದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.