ನಗರಸಭೆ ಪೌರ ಕಾರ್ಮಿಕೆಯರಿಗೆ ನೈರ್ಮಲ್ಯ ನಿರ್ವಹಣೆ ಕಾರ್ಯಗಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಮಹಿಳೆಯರು ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ ವಹಿಸಬೇಡಿ- ಡಾ. ಸುಧಾ ಎಸ್ ರಾವ್

ಪುತ್ತೂರು: ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆ, ಮನೆಯವರ ಮತ್ತು ಸಮಾಜದ ಆರೋಗ್ಯಕ್ಕೆ ನೀಡುವಷ್ಟೇ ಕಾಳಜಿಯನ್ನು ತಮ್ಮ ಆರೋಗ್ಯದ ಕಡೆಗೂ ನೀಡಬೇಕು ಎಂದು ಸ್ತ್ರೀರೋಗ ತಜ್ಞೆ ಡಾ. ಸುಧಾ ಎಸ್ ರಾವ್ ಅವರು ಹೇಳಿದರು.


ಪುತ್ತೂರು ಇನ್ನರ್‌ವೀಲ್ ಕ್ಲಬ್ ವತಿಯಿಂದ ನಗರಸಭೆ ಪೌರ ಕಾರ್ಮಿಕೆಯರಿಗೆ ಮತ್ತು ಮಹಿಳಾ ಸಿಬ್ಬಂದಿಗಳಿಗೆ ಜ.12ರಂದು ಪುತ್ತೂರು ಪುರಭವನದಲ್ಲಿ ನಡೆದ ಮಹಿಳೆಯರ ನೈರ್ಮಲ್ಯ ನಿರ್ವಹಣೆ ಕುರಿತ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು. ಸಾಮಾನ್ಯ ಕಾಯಿಲೆಗಳು ಬಂದಾಗ ನಿರ್ಲಕ್ಷ್ಯ ಮಾಡದೆ ತಪಾಸಣೆಗಳನ್ನು ಮಾಡಿಸಿಕೊಳ್ಳಬೇಕು ಎಂದ ಅವರು ಋತುಚಕ್ರದಲ್ಲಿ ನೈರ್ಮಲ್ಯ ಕಾಪಾಡುವ ಕುರಿತು ಸ್ಯಾನಿಟರಿ ಪ್ಯಾಡ್ ಬಳಸುವಲ್ಲಿ ಮಾಹಿತಿ ನೀಡಿದರು.

ಪೌರ ಕಾರ್ಮಿಕರಿಂದಾಗಿ ನಗರಸಭೆ ಸ್ವಚ್ಛತೆಯಲ್ಲಿ ಉತ್ತಮ ಸ್ಥಾನದಲ್ಲಿದೆ:
ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಮಾತನಾಡಿ ಸ್ವಚ್ಛತೆಯಲ್ಲಿ 6ನೇ ಸ್ಥಾನವಿದ್ದ ಪುತ್ತೂರು ನಗರಸಭೆ 3ನೇ ಸ್ಥಾನಕ್ಕೆ ಏರಲು ಕಾರಣ ಪೌರ ಕಾರ್ಮಿಕರು. ಅವರ ಶ್ರದ್ದೆಯ ಸೇವೆಯಿಂದ ಪುತ್ತೂರು ಸ್ವಚ್ಛವಾಗಿರುವುದು ನಮಗೆ ಹೆಮ್ಮೆ ತಂದಿದೆ ಎಂದರು.

ಮಹಿಳೆಯರ ಆರೋಗ್ಯಕ್ಕಾಗಿ ವಿವಿಧ ಕಾರ್ಯಕ್ರಮ:
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ವೀಣಾ ಬಿ.ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳೆಯರ ಅರೋಗ್ಯದ ಹಿತದೃಷ್ಟಿಯಿಂದ ಸಂಸ್ಥೆಯ ಮೂಲಕ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ. ಶಾಲಾ ಕಾಲೇಜುಗಳಲ್ಲೂ ಸ್ಯಾನಿಟರಿ ಪ್ಯಾಡ್ ಬರ್ನಿಂಗ್ ಮೆಷಿನ್ ನೀಡುವ ಮೂಲಕ ಹಲವು ಉತ್ತಮ ಕಾರ್ಯಕ್ರಮ ನಡೆಸಿದ್ದೇವೆ. ಅದೇ ರೀತಿ ಪರಿಸರದ ಸ್ವಚ್ಛತೆಯನ್ನು ಕಾಪಾಡುವ ಪೌರ ಕಾರ್ಮಿಕರು ಕೂಡಾ ಆರೋಗ್ಯವಂತರಾಗಿರಬೇಕೆಂದು ಅವರಿಗೆ ಆರೋಗ್ಯದ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಸಾರ್ವಜನಿಕ ಶೌಚಾಲಯದಲ್ಲಿ ಸ್ಯಾನಿಟರಿ ಪ್ಯಾಡ್:
ನಗರಸಭೆ ಪೌರಯುಕ್ತ ಮಧು ಎಸ್ ಮನೋಹರ್ ಅವರು ಮಾತನಾಡಿ ನಗರಸಭೆ ಸಾರ್ವಜನಿಕ ಶೌಚಾಲಯದಲ್ಲಿ ಸ್ಯಾನಿಟರಿ ಪ್ಯಾಡ್ ಇರಿಸುವ ಕುರಿತು ಚಿಂತಿಸಲಾಗಿದೆ ಎಂದ ಅವರು ಹಸಿ ಮತ್ತು ಒಣ ಕಸದ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ ಅವರು ನಗರಸಭೆ ಪೌರ ಕಾರ್ಮಿಕೆಯರಿಗೆ ಸಾಂಕೇತಿಕವಾಗಿ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಿದರು. ಇನ್ನರ್‌ವೀಲ್ ಕ್ಲಬ್ ಖಜಾಂಜಿ ಸುಧಾ ಕಾರ್ಯಪ್ಪ, ಕಾರ್ಯದರ್ಶಿ ರಾಜೇಶ್ವರಿ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಶ್ವೇತಾ ಕಿರಣ್ ಸಭೆಯಲ್ಲಿ ಉಪಸ್ಥಿತರಿದ್ದರು. ಸುಮಾರು 30 ಮಂದಿ ಪೌರ ಕಾರ್ಮಿಕೆಯರು ಮತ್ತು ನಗರಸಭೆ ಸಿಬ್ಬಂದಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಇನ್ನರ್‌ವೀಲ್ ಕ್ಲಬ್ ಉಪಾಧ್ಯಕ್ಷೆ ಟೈನಿ ದೀಪಕ್ ವಂದಿಸಿ, ಕೃಷ್ಣವೇಣಿ ಪ್ರಸಾದ್ ಮುಳಿಯ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.