ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಸಮಾಲೋಚನಾ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕ ಸಂಘದ ಪ್ರಥಮ ಮಹಾಸಭೆಯು ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು ಪ್ರತಿಯೊಬ್ಬರ ಜವಾಬ್ದಾರಿಗಳನ್ನು ವಿವರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲ ಶಆನಂದ ಪಿ. ಅವರು ವ್ಯವಸ್ಥಿತ ಬದುಕಿಗೆ ಶಿಕ್ಷಣ ಹೇಗೆ ಪೂರಕ ಎನ್ನುವುದನ್ನು ತಿಳಿಸುವುದರೊಂದಿಗೆ ಹಳ್ಳಿಯಲ್ಲಿ ಕಲಿತ ವಿದ್ಯಾರ್ಥಿಯು ಎಲ್ಲಿ ಬೇಕಾದರೂ ತನ್ನ ಸಾಧನೆಯನ್ನು ತೋರಿಸಬಹುದು ಎಂದರು. ಪಂಜ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಪ್ಪ ಗೌಡ ಇವರು ಮಾತಿನಂತೆ ನಮ್ಮ ಕೃತಿಯಾದರೆ ಪ್ರತಿಯೊಬ್ಬರೂ ತಲೆ ಎತ್ತಿ ನಿಲ್ಲಲು ಸಾಧ್ಯ ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಪ್ರಾಂಶುಪಾಲೆ ರಾಜಲಕ್ಷ್ಮೀ ಎಸ್ ರೈ ಅವರು ಸಂಸ್ಥೆಯ ರೀತಿ ನೀತಿಗಳನ್ನು ತಿಳಿಸಿದರು.   ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿಯವರು ವಿದ್ಯಾರ್ಥಿಗಳು ಕೌಶಲ್ಯಯುತ ಶಿಕ್ಷಣವನ್ನು ಪಡೆದು ಉತ್ತಮ ವೃತ್ತಿಯನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ರಕ್ಷಕ-ಶಿಕ್ಷಕ ಸಂಘದ ಸಮಿತಿಯನ್ನು ರಚಿಸಲಾಯಿತು. ಲೋಕೇಶ್ವರ ಅವರು ಅಧ್ಯಕ್ಷರಾಗಿ,  ಅಬ್ದುಲ್ಲಾ ಎ.ಸಿ, ಸದಾಶಿವ, ಆನಂದ, ಬಾಬು, ರೇಖಾ ಹಾಗೂ ಯಶೋಧಾ ಅವರು ಸದಸ್ಯರಾಗಿ ನೇಮಕಗೊಂಡರು. ಈ ಸಂದರ್ಭದಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ಬಿ.ಎ., ಬಿ.ಕಾಂ. ತರಗತಿಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಕೊಟ್ಟು ಪ್ರೋತ್ಸಾಹಿಸಲಾಯಿತು.
ಹಿಂದಿನ ವರ್ಷದ ರಕ್ಷಕ ಶಿಕ್ಷಕ ಸಂಘದ ವರದಿಯನ್ನು ವಾಣಿಜ್ಯಶಾಸ್ತ್ರ ಉಪನ್ಯಾಸಕ ನಿತೇಶ್ ಅವರು ವಾಚಿಸಿದರು. ಇತಿಹಾಸ  ಉಪನ್ಯಾಸಕಿ ಪ್ರತಿಭಾ ಎಸ್ ಅವರು ಸಮಿತಿ ರಚನೆ ಮಾಡಿದರು. 
ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ಸಹಕರಿಸಿದರು. ಸಂಸ್ಥೆಯ ಉಪಪ್ರಾಂಶುಪಾಲ ಶೇಷಗಿರಿ ಎಂ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕ ಹರ್ಷಿತ್ ಕುಮಾರ್ ಶೆಟ್ಟಿ ವಂದಿಸಿದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.