ಕಡಬ : ಅತ್ಯಾಚಾರ ಸಂತ್ರಸ್ತೆಯ ಮೇಲೆ ರೇಪ್ ಮಾಡಿ ಗರ್ಭೀಣಿಯಾಗಿಸಿದ ಪ್ರಕರಣ

0

  • ಬಂಧನವಾಗಿ 100 ದಿನಕಳೆದರೂ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ಜಾಮೀನು ಅರ್ಜಿ ತಿರಸ್ಕೃತ

ಕಡಬ: ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಸಲುಗೆ ಬೆಳೆಸಿ ಬಳಿಕ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್‌ಸ್ಟೆಬಲ್‌ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ.

ಕಡಬ ತಾಲೂಕಿನ ಕುಂತೂರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ. 28 ರಂದು ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ದ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಇದೀಗ ಆತನ ಬಂಧನವಾಗಿ 100 ದಿನ ಕಳೆದಿದ್ದು ಹಾಗೂ ಪ್ರಕರಣದ ದೋಷಾರೋಪಣ ಪಟ್ಟಿ ಕೂಡ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ಆರೋಪಿ ಪರ ವಕೀಲರು ಜಾಮೀನು ಕೋರಿ ಪುತ್ತೂರಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದು‌ ಈಗ ತಿರಸ್ಕೃತಗೊಂಡಿದೆ.

ಏನಿದು ಪ್ರಕರಣ?

ಈ ಹಿಂದೆ ಕಡಬ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ರಕ್ಷಣೆ ನೀಡಬೇಕಾದ ಪೊಲೀಸ್ ಸಿಬಂದಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಡಬದ ಸ್ಥಳೀಯ ಮಾದ್ಯಮವೊಂದರಲ್ಲಿ ವರದಿ ಪ್ರಕಟವಾಗುವ ಮೂಲಕ ಪ್ರಕರಣ ಬಹಿರಂಗಗೊಂಡಿತ್ತು. ಬಳಿಕ ಸಂತ್ರಸ್ತೆಯ ತಂದೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

‘ಎರಡು ವರ್ಷಗಳ ಹಿಂದೆ ನನ್ನ ಮಗಳು ಅತ್ಯಾಚಾರಕ್ಕೆ ಒಳಗಾಗಿದ್ದಳು. ಆ ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ಶಿವರಾಜ್ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದ. ಆಗ ಪರಿಚಯಸ್ಥನಾಗಿದ್ದು, ಪ್ರಕರಣ ಮುಗಿದಿದ್ದರೂ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು’ ಎಂದು ಸಂತ್ರಸ್ತೆಯ ತಂದೆ ದೂರಿನಲ್ಲಿ ತಿಳಿಸಿದ್ದರು.

ಮಗಳನ್ನು ವಿಚಾರಿಸಿದಾಗ, ಕಡಬ ಪೊಲೀಸ್ ಸಿಬ್ಬಂದಿ ನನ್ನನ್ನು ಮದುವೆ ಆಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದೀಗ ಐದೂವರೆ ತಿಂಗಳ ಗರ್ಭಿಣಿ ಆಗಿರುವುದಾಗಿ ತಿಳಿಸಿದ್ದಾಳೆ. ಈ ಮಧ್ಯೆ ನನ್ನ ಮಗಳು ಹಾಗೂ ಪತ್ನಿಯನ್ನು ಆತ ಮಂಗಳೂರು ಎಲ್ಲಿಯೋ ಅಜ್ಞಾತ ಸ್ಥಳದಲ್ಲಿರಿಸಿದ್ದು, ಅವರನ್ನು ಪತ್ತೆ ಹಚ್ಚಬೇಕು. ಆರೋಪಿಯನ್ನು ಬಂಧಿಸಿ ಆತನನ್ನು ವಿಚಾರಣೆ ನಡೆಸಿ ನನ್ನ ಮಗಳಿಗೆ ನ್ಯಾಯ ಕೊಡಿಸಬೇಕು’ ಎಂದು ದೂರಿನಲ್ಲಿ ಒತ್ತಾಯಿಸಿದ್ದರು. ರಾಜ್ಯಮಟ್ಟದಲ್ಲಿ ಸಂಚಲನ ಮೂಡಿಸಿದ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

LEAVE A REPLY

Please enter your comment!
Please enter your name here