ಪ್ರಿಯದರ್ಶಿನಿಯಲ್ಲಿ “ಆರೆಂಜ್ ಕಲರ್ ಡೇ” ಕಾರ್ಯಕ್ರಮ 

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು :  ಪ್ರಿಯದರ್ಶಿನಿ ವಿದ್ಯಾಸಂಸ್ಥೆ ಬೆಟ್ಟಂಪಾಡಿಯಲ್ಲಿ `ಆರೆಂಜ್ ಕರ್ ಡೇ’ ಕಾರ್ಯಕ್ರಮ   ಜ.13ರಂದು  ನಡೆಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ತಯಾರಿಸಿದ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಪೋಷಕರಿಗೆ ಆಯೋಜಿಸಲಾಗಿದ್ದ ಸಂಗೀತ ಕುರ್ಚಿ ಹಗ್ಗಜಗ್ಗಾಟ ಮುಂತಾದ ಸ್ಪರ್ಧೆಗಳು ಎಲ್ಲರ ಗಮನ ಸೆಳೆಯಿತು. ಪುಟ್ಟಮಕ್ಕಳು ಹಾಗೂ ಪೋಷಕರಿಂದ ವೈವಿಧ್ಯಮಯ ಸಾಂಸ್ಕ್ರತಿಕ ಪ್ರದರ್ಶನ ಎಲ್ಲರ ಮೆಚ್ಚುಗೆ ಪಡೆಯಿತು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

 


ಆಡಳಿತ ಮಂಡಳಿಯ ಅಧ್ಯಕ್ಷರಾದ ರಂಗನಾಥ ರೈ, ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಪೋಷಕ ಬಂಧು ರಾಧಾಕೃಷ್ಣ ಬೋರ್ಕರ್ ಮುಖ್ಯ ಅತಿಥಿಯಾಗಿ ವೇದಿಕೆಯನ್ನು ಅಲಂಕರಿಸಿದ್ದರು. ಶಾಲಾ ಮುಖ್ಯಗುರು ರಾಜೇಶ್ ನೆಲ್ಲಿತ್ತಡ್ಕ, ಶಿಕ್ಷಕವೃಂದ, ವಿದ್ಯಾರ್ಥಿವೃಂದ, ಪೋಷಕರು ಕಾರ್‍ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೆ.ಜಿ. ವಿಭಾಗದ ಮಾತಾಜಿಯವರಾದ ಕೃಷ್ಣವೇಣಿ ಹಾಗೂ ಗೌತಮಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.