ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ

0

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ಜ.14ರಂದು ನಡೆದಿದೆ.

ಮಂಗಳೂರು ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು ಪರ್ಲಡ್ಕ ಬೈಪಾಸ್ ರಸ್ತೆಯ ಬಳಿ ಇದ್ದ ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಪರಿವರ್ತಕ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ. ಕಾರಿನೊಳಗಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here