ಬೆಳ್ಳಾರೆ ಯಾದವ ಸಭಾ ಪ್ರಾದೇಶಿಕ ಸಮಿತಿ ವತಿಯಿಂದ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ

0

ಯಾದವ ಸಭಾ ಪ್ರಾದೇಶಿಕ ಸಮಿತಿ ಬೆಳ್ಳಾರೆ ವತಿಯಿಂದ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ. 4 ರಂದು ನಡೆಯಿತು.

 

ಸಭಾಧ್ಯಕ್ಷತೆಯನ್ನು ಬೆಳ್ಳಾರೆ ಯಾದವ ಸಭಾ ಪ್ರಾದೇಶಿಕ ಸಮಿತಿ ಅಧ್ಯಕ್ಷ ಆನಂದ ಉಮಿಕ್ಕಳ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಯಾದವ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ಎ.ಕೆ. ಮಣಿಯಾಣಿ, ಉಪಾಧ್ಯಕ್ಷ ವಿ.ವಿ.ಬಾಲನ್, ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಕಾರ್ಯದರ್ಶಿ ಕೃಷ್ಣ ಬೆಟ್ಟ, ತಾಲೂಕು ಮಹಿಳಾ ಸಮಿತಿ ಅಧ್ಯಕ್ಷೆ ರಾಜೀವಿ ಪರ್ಲಿಕಜೆ, ಬೆಳ್ಳಾರೆ ಪ್ರಾದೇಶಿಕ ಸಮಿತಿ ಕಾರ್ಯದರ್ಶಿ ಶಶಿಧರ ಬೀಡು ಉಪಸ್ಥಿತರಿದ್ದರು. ಚಂದ್ರಹಾಸ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಆನಂದ ಉಮಿಕ್ಕಳ ಸ್ವಾಗತಿಸಿ, ಶಶಿಧರ ಬೀಡು ವಂದಿಸಿದರು. ನಂತರ ವಿ.ವಿ. ಬಾಲನ್‌ರವರು ಕೊಡಮಾಡಿದ ಪ್ರತಿಭಾ ಪುರಸ್ಕಾರವನ್ನು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಕ್ಕಳಿಗೆ ನೀಡಲಾಯಿತು.

LEAVE A REPLY

Please enter your comment!
Please enter your name here