ಪ್ರೌಢಶಾಲಾ ವಿಭಾಗ ವಲಯ ಮಟ್ಟದ ಪ್ರತಿಭಾ ಕಾರಂಜಿ

0

 

ಸುಳ್ಯ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ಗಾಂಧಿನಗರ ಸುಳ್ಯ ಇದರ ಸಂಯುಕ್ತಾಶ್ರಯದಲ್ಲಿ ವಿಭಾಗದ 2022 23 ನೇ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಗಾಂಧಿನಗರ ಕೆ ಪಿ ಎಸ್ ನಲ್ಲಿ ನಡೆಯಿತು.

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಎಸ್ ಪ್ರೌಢಶಾಲಾ ವಿಭಾಗದ ಕಾರ್ಯಾಧ್ಯಕ್ಷ ಪ್ರವೀಣ್ ನಾಯಕ್ ವಹಿಸಿದ್ದರು.
ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹದೇವ, ಶಿಕ್ಷಣ ಇಲಾಖೆಯ ಮುಖ್ಯಸ್ಥರಾದ ಶ್ರೀಮತಿ ನಳಿನಿ, ಬಿ ಆರ್ ಸಿ ಗಳಾದ ಶ್ರೀಮತಿ ಶೀತಲ್, ಚಂದ್ರಶೇಖರ, ಕಾಲೇಜು ರಾಜ್ಯಪಾಲರಾದ ಅಬ್ದುಲ್ ಸಮದ್, ಪ್ರಾಥಮಿಕ ಶಾಲಾ ವಿಭಾಗದ ಅಧ್ಯಕ್ಷ ಆರ್ ಕೆ ಮಹಮ್ಮದ್,ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಶಿಕ್ಷಕರುಗಳಾದ ಸೂಫಿ ಮಾಸ್ಟರ್,ಅರುಣ್, ಶಾಲಾ ಸಮಿತಿಯ ಮುಖಂಡರುಗಳಾದ ಎನ್ ಎ ರಾಮಚಂದ್ರ, ಎಂ ವೆಂಕಪ್ಪಗೌಡ, ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕರಾದ ಅರುಣ್ ಸ್ವಾಗತಿಸಿ ಶ್ರೀಮತಿ ಸಹನಾಜ್ ಕಾರ್ಯಕ್ರಮ ನಿರೂಪಿಸಿದರು.
ಪ್ರತಿಭಾ ಕಾರಂಜಿಯಲ್ಲಿ ವಲಯ ಮಟ್ಟದ ಸುಮಾರು ಹತ್ತಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧಾ ಕಾರ್ಯಕ್ರಮದಲ್ಲಿ ಜಾನಪದ ಸಂಗೀತ, ಕವಾಲಿ, ಗಜಲ್, ಮಿಮಿಕ್ರಿ, ರಸಪ್ರಶ್ನೆ, ಪ್ರಬಂಧ, ಮುಂತಾದ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು.
ಸಂಜೆ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಶಾಲಾ ಶಿಕ್ಷಕ ವೃಂದದವರು, ವಲಯ ಮಟ್ಟದ ಶಾಲಾ ಶಿಕ್ಷಕರು ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು.
ಸುಳ್ಯ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಎಪ್ಪತ್ತು ಅಂಕಗಳನ್ನು ಪಡೆದು ವಲಯ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. 55 ಅಂಕಗಳೊಂದಿಗೆ ಸುಳ್ಯ ರೋಟರಿ ಶಾಲೆ ದ್ವಿತೀಯ ಸ್ಥಾನ ಪಡೆಯಿತು.
ಶಿಕ್ಷಕ ಚಿನ್ನಪ್ಪ ಗೌಡ ಎಂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿ ವಂದಿಸಿದರು.
ಶಾಲಾ ಶಿಕ್ಷಕ ವೃಂದದವರು, ಕಾಲೇಜು ಉಪನ್ಯಾಸಕರುಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here