ನಡುಗಲ್ಲು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಶಾಲಾ ಸಂಸತ್ತು, ವಿದ್ಯಾರ್ಥಿಗಳ ಶಿಕ್ಷಕರ ಸಹಭಾಗಿತ್ವದೊಂದಿಗೆ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಸ್ವಾಗತ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪ್ಪಾಡಿ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು, ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕರನ್ನು ಹೂಗುಚ್ಛ ಹಾಗೂ ಕಿರು ಕಾಣಿಕೆಯನ್ನು ನೀಡಿ ಸನ್ಮಾನಿಸಿದರು. ಶಿಕ್ಷಕರಿಗಾಗಿ ಅಭಿನಯ ಗೀತೆ, ಲಕ್ಕಿಗೆ ಗೇಮ್, ಚೀಟಿ ಎತ್ತಿ ಅಭಿನಯ ಸ್ಪರ್ಧೆಗಳನ್ನು ಏರ್ಪಡಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು ಬಹಳ ಹುಮ್ಮಸ್ಸಿನಿಂದ ತೊಡಗಿಸಿಕೊಂಡರು. ಕಾರ್ಯಕ್ರಮ ದಲ್ಲಿ ಉದ್ಘಾಟಕರು, ಸಂದರ್ಭೋಚಿತವಾಗಿ ಮಾತನಾಡಿದರು. ಸಾಂಸ್ಕೃತಿಯ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ನಿರ್ವಹಣೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಯಶ್ವಿತ್ ಮಾಡಿದನು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆಲ್ಲರಿಗೂ ಸಿಹಿ ಊಟ ನೀಡಲಾಯಿತು.

LEAVE A REPLY

Please enter your comment!
Please enter your name here