- ಪಾರದರ್ಶಕ ಆಡಳಿತವೇ ನಮ್ಮ ಗುರಿ: ಬಾಲಕೃಷ್ಣ ಆಳ್ವ ಕೊಡಾಜೆ
ವಿಟ್ಲ: ಸರಕಾರದ ಅಥವಾ ಪಂಚಾಯತ್ ನ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಮತ್ತು ಪಾರದರ್ಶಕವಾದ ಆಡಳಿತವನ್ನು ನೀಡುವುದು ನಮ್ಮ ಗುರಿ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಪಂಚಾಯತ್ ಸಭಾಂಗಣದಲ್ಲಿ ಜರಗಿದ ವಿಕಲಚೇತನರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣಾ ಸಮಾರಂಭದ ಅಧ್ಯಕ್ಷತೆ ಅವರು ವಹಿಸಿ ಮಾತನಾಡಿದರು. ಜನಪ್ರತಿನಿಧಿಗಳು ಸಾಮಾನ್ಯ ಜನರ ಕಷ್ಟ ಮತ್ತು ಅಗತ್ಯಗಳನ್ನು ಅರಿತು ಸೇವಾ ಮನೋಭಾವನೆಯಿಂದ ಸಮಾಜದಲ್ಲಿ ಗುರುತಿಸಿಕೊಂಡಾಗ ತಮ್ಮ ಗುರಿಯನ್ನು ತಲುಪಲು ಸಾಧ್ಯ ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಸುಮಾರು 23 ಮಂದಿ ಫಲಾನುಭವಿಗಳಿಗೆ ಒಂದು ಲಕ್ಷಕ್ಕಿಂತಲೂ ಹೆಚ್ಚು ಮೊತ್ತದ ಚೆಕ್ಕನ್ನು ವಿತರಿಸಲಾಯಿತು. ಪಂಚಾಯತ್ ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಇಬ್ರಾಹಿಂ.ಕೆ.ಮಾಣಿ, ಸೀತಾ, ಮಿತ್ರಾಕ್ಷಿ ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.