ರಾಹುಲ್ ಗಾಂಧಿ ನೇತ್ರತ್ವದಲ್ಲಿ ಭಾರತ್ ಜೋಡೋ ಯಾತ್ರೆ

0

 

ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸರ್ವಧರ್ಮ ಪ್ರಾರ್ಥನೆ

 

ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತದ ಐಕ್ಯತೆ ಮತ್ತು ಏಕತೆಗಾಗಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3500 ಕಿ.ಮೀ ದೂರದ ಪಾದಯಾತ್ರೆ, ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ನಿರ್ವಿಘ್ನವಾಗಿ ಯಶಸ್ವಿಯಾಗಲಿ ಎಂದು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ, ಬೀರಮಂಗಲದ ಸಂತ ಬ್ರಿಜಿಡ್ ಚರ್ಚ್ ನಲ್ಲಿ ಹಾಗೂ ಮೊಗರ್ಪಣೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ, ಬೆಟ್ಟ ಜಯರಾಮ್ ಭಟ್, ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಸಾಮಾಜಿಕ ಜಾಲತಾಣ ಅಧ್ಯಕ್ಷ ಚೇತನ್ ಕಜೆಗದ್ದೆ,ಜಿಲ್ಲಾ ಹಿಂದುಳಿದ ವರ್ಗಗಳ ಘಟಕ ಕಾರ್ಯದರ್ಶಿ ಸುರೇಶ್ ಕಾಮತ್ ಜಯನಗರ, ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ, ಮಾಜಿ ನಗರ ಪಂಚಾಯತ್ ಸದಸ್ಯೆ ಜೂಲಿಯಾನ ಕ್ರಾಸ್ತಾ, ಮೊಗರ್ಪಣೆ ಮಸೀದಿ ಅಧ್ಯಕ್ಷ ಉಂಬಾಯಿ, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಮಹಮ್ಮದ್ ಕುಂಞ ಹಳೆಗೇಟು, ಮೊಹಮ್ಮದ್ ಹಳೆಗೇಟು ಮೊಲಾದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here