ಕೊಂಬಾರು ನಿಲ್ಲಿಸಿದ್ದ ಹಿಟಾಚಿ ಬೆಂಕಿಗಾಹುತಿ, ಲಕ್ಷಾಂತರ ರೂ. ನಷ್ಟ

0


ಕಡಬ: ನೋಡ ನೋಡುತ್ತಿದ್ದಂತೆಯೇ ಹಿಟಾಚಿ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಜ.17ರಂದು ಸಂಜೆ ಕಡಬ ಸಮೀಪದ ಕೊಂಬಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ವ್ಯಕ್ತಿಗೆ ಸೇರಿದ ಹಿಟಾಚಿಯನ್ನು ಕೊಂಬಾರು ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಲಾಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ತಕ್ಷಣವೇ ಹಿಟಾಚಿಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ನೀರು ಹಾಯಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ, ಬೆಂಕಿ ಪಸರಿಸಿದ್ದರಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ.

LEAVE A REPLY

Please enter your comment!
Please enter your name here