ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಕಾರ್ಯನಿರ್ವಹಣೆಗೆ ಪ್ರಶಸ್ತಿ

0

 

 

ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಕೊಡಮಾಡುವ ಪ್ರಶಸ್ತಿಗಳನ್ನು ದಿನಾಂಕ.9.9.2022 ರಂದು ಮಡಿಕೇರಿ ಕೊಡವ ಸಮಾಜದಲ್ಲಿ ನಡೆದ ಬ್ಯಾಂಕಿನ 97 ನೇ ವಾರ್ಷಿಕ ಮಹಾಸಭೆ ಸಂದರ್ಭದಲ್ಲಿ ವಿತರಿಸಲಾಯಿತು.
ಮಡಿಕೇರಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಡೆದರೆ ,ದ್ವಿತೀಯ ಸ್ಥಾನವನ್ನು ಮದೆನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಡೆಯಿತು. ತೃತೀಯ ಸ್ಥಾನವನ್ನು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನೀಡಲಾಯಿತು.
ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕ ಕಿಮ್ಮುಡೀರ ಜಗದೀಶ್ ರವರು ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನವನ್ನು ಪಯಸ್ವಿನಿ ಸಂಘದ ಅಧ್ಯಕ್ಷ ಶ್ರೀ ಅನಂತ್ ಊರುಬೈಲು ಮತ್ತು ಕಾರ್ಯನಿರ್ವಹಣಾಧಿಕಾರಿ  ಬಿ.ಕೆ. ಆನಂದ ರವರಿಗೆ ಪ್ರಧಾನ ಮಾಡಿದರು.

LEAVE A REPLY

Please enter your comment!
Please enter your name here