ಕಳಂಜ: ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ ಮಾಸಾಚರಣೆ

0

 

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಕಳಂಜ ಶ್ರೀ ರಕ್ಷ ಗೊಂಚಲು ಸಮಿತಿ ಕಳಂಜ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ ಮಾಸಾಚರಣೆ, ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ, ಕಾರ್ಯಕ್ರಮವು ಅಯ್ಯನಕಟ್ಟೆ ಪಂ. ದೀನದಯಾಲ್ ಸಭಾಭವನದಲ್ಲಿ ಸೆ. 9ರಂದು ನಡೆಯಿತು.

ಕಳಂಜ ಗ್ರಾ. ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಸೊಸೈಟಿಯ ಉಪಾಧ್ಯಕ್ಷೆ ಶ್ರೀಮತಿ ಸುಜಾತ, ಪಂಚಾಯತ್ ಸದಸ್ಯೆ ಶ್ರೀಮತಿ ಪ್ರೇಮಲತ, ಅಯ್ಯನಕಟ್ಟೆ ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷ ಸತಿಶ್ಚಂದ್ರ, ಕಳಂಜ ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಶಿಲ್ಪಾ ಉಪಸ್ಥಿತರಿದ್ದು ಶುಭ ಹಾರೈಸಿದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀರಕ್ಷ ಗೊಂಚಲು ಸಮಿತಿಯ ಅಧ್ಯಕ್ಷೆ ಯಶೋದ ಮಣಿಮಜಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಪೌಷ್ಟಿಕಾಹಾರದ ಬಗ್ಗೆ ಸಮಗ್ರವಾಗಿ ಕಳಂಜ ಗ್ರಾಮದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ ಕೆ.ಸಿ ಮಾಹಿತಿ ನೀಡಿದರು. ಅಪೌಷ್ಟಿಕ ಮಕ್ಕಳಿಗೆ ಪೋಷಣ್ ಪೌಡರ್ ಕಳಂಜ ಗ್ರಾಮ ಪಂಚಾಯತ್ ವತಿಯಿಂದ ನೀಡಿದರು. ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಕಾರ್ಯಕ್ರಮದಡಿ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನಡೆಸಿ ಬಂದಿರುವ ಮಕ್ಕಳಿಗೆ ಇಲಾಖಾ ವತಿಯಿಂದ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಪೋಷಕರು ಸ್ರೀ ಶಕ್ತಿ ಸಂಘಗಳಿಗೆ ಪೌಷ್ಟಿಕ ಆಹಾರ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ವಿಷ್ಣುನಗರ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರಂಜಿತ ಸ್ವಾಗತಿಸಿ ಶ್ರೀರಕ್ಷ ಗೊಂಚಲಿನ ಕಾರ್ಯದರ್ಶಿ ಶ್ರೀಮತಿ ಪುಷ್ಪಾ ಕಿಲಂಗೋಡಿ ವಂದಿಸಿದರು. ತಂಟೆಪ್ಪಾಡಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಯಶೋದ ತಂಟೆಪ್ಪಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಳಂಜ ಗ್ರಾಮದ ಕೋಟೆಮುಂಡುಗಾರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ವಿಜಯ ಮತ್ತು ಅಯ್ಯನಕಟ್ಟೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ದೀಪ್ತಿ ಸಹಕರಿಸಿದರು.‌ ಕಾರ್ಯಕ್ರಮದಲ್ಲಿ ಅಯ್ಯನಕಟ್ಟೆ ಶಾಲಾ ಸಿಬ್ಬಂದಿಗಳು, ಮಕ್ಕಳು, ಪೋಷಕರು, ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

LEAVE A REPLY

Please enter your comment!
Please enter your name here