ಜ.21 – ದುರ್ಗಾಗಿರಿ ಶ್ರೀ ದುರ್ಗಾ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಪ್ರವೇಶೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ದುರ್ಗಾಗಿರಿಯಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ದುರ್ಗಾ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಪ್ರವೇಶೋತ್ಸವ ಜ.21ರಂದು ನಡೆಯಲಿದೆ.


ಜ.20ರಂದು ಶ್ರೀ ಮಂದಿರದಲ್ಲಿ ವೇ.ಮೂ. ಕರಾಯ ಹರಿಪ್ರಸಾದ್ ವೈಲಾಯರ ನೇತೃತ್ವದಲ್ಲಿ ಬೆಳಗ್ಗೆ ಸ್ಥಳ ಶುದ್ಧಿ, ದ್ವಾದಶ ನಾಳಿಕೇರ ಗಣಯಾಗ, ರಕ್ತೇಶ್ವರಿ ಕಲಶ ಮತ್ತು ಪರ್ವ, ೧೦ಕ್ಕೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ವಠಾರದಿಂದ ಹಸಿರುವಾಣಿ ಸಮರ್ಪಣೆ ನಡೆಯಲಿದೆ. ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ ಹೊರೆಕಾಣಿಕೆ ಮೆರವಣಿಗೆ ಉದ್ಘಾಟಿಸಲಿದ್ದು, ಬಳಿಕ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಉಗ್ರಾಣ ಮುಹೂರ್ತ ನೆರವೇರಿಸಲಿದ್ದು, ಉದ್ಯಮಿ ಹೇರಂಭ ಶಾಸ್ತ್ರಿ ಕಾರ್ಯಾಲಯ ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 12ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದ ಶ್ರೀ ಗಣೆಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಉದ್ಘಾಟಿಸಲಿದ್ದಾರೆ. ಉದ್ಯಮಿ ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ೫ರಿಂದ ದೇವತಾ ಪ್ರಾರ್ಥನೆ, ಆಚಾರ್ಯ- ಮೇಸ್ತಿಗಳಿಗೆ ಗೌರವ, ಸ್ವಸ್ತಿ ಪುಣ್ಯಾಹವಾಚನ, ಸಪ್ತಶುದ್ಧಿ, ರಕ್ಷೆಘ್ನ ಶಾಂತಿ, ವಾಸ್ತು ಪೂಜೆ, ವಾಸ್ತು ಬಲಿ, ಪ್ರಕಾರ ಬಲಿ, ದುರ್ಗಾ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ೭ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಪುತ್ತೂರು ತಾಲೂಕು ಅಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರು ಗುತ್ತು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಉಷಾಚಂದ್ರ ಮುಳಿಯ ಭಾಗವಹಿಸಲಿದ್ದಾರೆ. ಬಳಿಕ ಅನ್ನಸಂತರ್ಪಣೆ ನಡೆದು, ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಜ.21ರಂದು ಬೆಳಗ್ಗೆ ೭ಕ್ಕೆ ಗಣಯಾಗ, ತುಳಸೀ ಪ್ರತಿಷ್ಠೆ, ದ್ವಾರ ಮಹಾಲಕ್ಷ್ಮೀ ಪೂಜೆ, ನವಗ್ರಹ ಪೂಜೆ ನಡೆಯಲಿದ್ದು, 9.12ಕ್ಕೆ ಪುನರ್ ನಿರ್ಮಾಣ ಮಂದಿರದ ಲೋಕಾರ್ಪಣೆ ಮತ್ತು ಪ್ರವೇಶೋತ್ಸವ ನಡೆಯಲಿದೆ.

ಬೆಳಗ್ಗೆ 10ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಆಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಮಂಜುನಾಥ ಭಜನಾ ಪರಿಷತ್‌ನ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯ, ಗೆಜ್ಜೆಗಿರಿ ಕ್ಷೇತ್ರಾಡಳಿತದ ಅಧ್ಯಕ್ಷ ಜಯಂತ ನಡುಬೈಲು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12ಕ್ಕೆ ಚಂಡಿಕಾಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5ರಿಂದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ದುರ್ಗಾ ನಮಸ್ಕಾರ ಪೂಜೆ ಆರಂಭವಾಗಲಿದ್ದು, ೭:೩೦ಕ್ಕೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 7:45 ಶ್ರೀ ರಕ್ತೇಶ್ವರಿ ದೈವದ ಭಂಡಾರ ತೆಗೆದು, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ೯ರಿಂದ ಶ್ರೀ ರಕ್ತೇಶ್ವರಿ ದೈವಕ್ಕೆ ನರ್ತನ ಸೇವೆ ನಡೆಯಲಿದೆ. ಬಳಿಕ `ಏರ್ ಎಂಚಾಂದ್ ಏರೆಗ್ ಗೊತ್ತು’ ತುಳು ಸಾಮಾಜಿಕ ನಾಟಕ ಪ್ರದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.