ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ‘ಲಂಚ, ಭ್ರಷ್ಟಾಚಾರಕ್ಕೆ ಬಹಿಷ್ಕಾರ-ಉತ್ತಮ ಸೇವೆಗೆ ಪುರಸ್ಕಾರ’ ಘೋಷಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ‘ಲಂಚ, ಭ್ರಷ್ಟಾಚಾರಕ್ಕೆ ಬಹಿಷ್ಕಾರ-ಉತ್ತಮ ಸೇವೆಗೆ ಪುರಸ್ಕಾರ’ ಮತ್ತು ಭ್ರಷ್ಟಾಚಾರ ಮುಕ್ತ ಪುತ್ತೂರು ತಾಲೂಕು’ ಘೋಷಣೆ ಮೊಳಗಿಸಲಾಯಿತು.‌


ಸುದ್ದಿ ಜನಾಂದೋಲನ ವೇದಿಕೆಯ ನೇತೃತ್ವದಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ಕಾಲೇಜಿನ‌ ತರಗತಿಗಳಲ್ಲಿ ವಿದ್ಯಾರ್ಥಿಗಳು ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದರು. ಪ್ರಾಂಶುಪಾಲ ಸುರೇಶ್ ಎಂ.ಕೆ. ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.‌ ಹಿರಿಯ ಉಪನ್ಯಾಸಕ ಈಶ್ವರ ಭಟ್ ಅವರು ಸುದ್ದಿ ಬಿಡುಗಡೆಯ ಪ್ರಧಾನ ಸಂಪಾದಕ ಡಾ.ಯು.ಪಿ.ಶಿವಾನಂದರವರ ನೇತೃತ್ವದಲ್ಲಿ ಕಳೆದ 37 ವರ್ಷಗಳಿಂದ ನಡೆಯುತ್ತಿರುವ‌ ನಿರಂತರ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವೈಲೆಟ್ ಮೇರಿ ಸಹಕರಿಸಿದರು.


ಸುದ್ದಿ ಚಾನೆಲ್ ನಿರೂಪಕ ಶಿವಪ್ರಸಾದ್ ರೈ ಪೆರುವಾಜೆರವರು ಆಂದೋಲನದ ಮಾಹಿತಿ ನೀಡಿದರು. ಸುದ್ದಿ ಬಿಡುಗಡೆ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಮತ್ತು ಟೌನ್ ರಿಪೋರ್ಟರ್ ವಸಂತ ಸಾಮೆತ್ತಡ್ಕ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.