ರಾಮಕುಂಜ ಕಿಂಡರ್ ಗಾರ್ಟನ್‌ನಲ್ಲಿ ಮಕರ ಸಂಕ್ರಾಂತಿ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕಿಂಡರ್ ಗಾರ್ಟನ್‌ನಲ್ಲಿ ಜ.14ರಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಕಾಶದಲ್ಲಿ ಹಾರುವ ಸುಂದರ ಗಾಳಿಪಟಗಳಂತೆ ಬದುಕು ಕೂಡಾ ಯಶಸ್ಸು ಮತ್ತು ಸಂತೋಷದಿಂದ ಕೂಡಿರಲಿ ಎಂಬ ಉದ್ದೇಶದಿಂದ ಗಾಳಿಪಟ ಹಾರಿಸುವ ಮೂಲಕ ಮಕ್ಕಳ ಮುಗ್ಧ ಮನಸ್ಸಿಗೆ ಸಂತಸ ತರುವ ರೀತಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು.

 

ಈ ಚಟುವಟಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈ, ಆಡಳಿತಾಧಿಕಾರಿ ಆನಂದ್ ಎಸ್.ಟಿ., ಪ್ರೌಢಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಕ್ಷತಾ ಟಿ, ಶಿಕ್ಷಕ ವೃಂದ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here