ಲಂಚ ಪಡೆದ ಆರೋಪ – ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯಿಂದ ಆತ್ಮಹತ್ಯೆಗೆ ಯತ್ನ ಪ್ರಕರಣ

0

  • ಕೆಲಸ ನಿಲ್ಲಿಸಿ‌ ಮುಷ್ಕರ ಆರಂಭಿಸಿದ ಸಿಬ್ಬಂದಿಗಳು

ವಿಟ್ಲ: ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯತ್ ಮಾಜಿ  ಸದಸ್ಯರೊಬ್ಬರು ರಾಜೇಶ್ ರವರ ಮೇಲೆ ಲಂಚ ಕೇಳಿದ ಆರೋಪ ಹೊರಿಸಿ ಮೇಲಾಧಿಕಾರಿಗಳಿಗೆ ದೂರು ಕೊಡಿಸಿದ್ದರಿಂದ ಮನನೊಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ರವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಯತ್ನಿಸಿದ್ದರು. ಸಿಬ್ಬಂದಿಗೆ ಕಿರುಕುಳ ಘಟನೆಯನ್ನು ಖಂಡಿಸಿ ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಕೆಲಸ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ.

 

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ‌. ವಿಟ್ಲದ ಮಂಗಳಪದವು ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯತ್ ಮಾಜಿ  ಸದಸ್ಯರೊಬ್ಬರು ರಾಜೇಶ್ ರವರ ಮೇಲೆ ಲಂಚ ಕೇಳಿದ ಆರೋಪ ಹೊರಿಸಿ ಮೇಲಾಧಿಕಾರಿಗಳಿಗೆ ದೂರು ಕೊಡಿಸಿದ್ದರೆನ್ನಲಾಗಿದೆ.

ಜ.೨೦ರಂದು ಬೆಳಿಗ್ಗೆ ರಾಜೇಶ್ ಕೆಲವರಿಗೆ  ವಾಟ್ಸಾಪ್ ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿದ್ದು, ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ್ದು, ಇದರಿಂದ ಮಾನಸಿಕವಾಗಿ ಮನನೊಂದಿರುತ್ತೇನೆ. ಆದುರಿಂದ ನಾನು ಆತ್ಮಹತ್ಯೆ ಮಾಡುತ್ತೇನೆ ಎಂದು ಸಂದೇಶ ಕಳುಹಿಸಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ವಿಚಾರ ರಾಜೇಶ್ ಸ್ನೇಹಿತರ ಗಮನಕ್ಕೆ ಬಂದಿದ್ದು, ತಕ್ಷಣವೇ ಅವರು ರಾಜೇಶ್ ಗಾಗಿ ಹುಟುಕಾಟ ಪ್ರಾರಂಭಿಸಿದ್ದು, ಆ ವೇಳೆ ಅವರು ನೇತ್ರಾವತಿ ಸೇತುವೆ ಸಮೀಪ ಪತ್ತೆಯಾಗಿದ್ದಾರೆ. ಬಳಿಕ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ. ಲಂಚದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಮಗೆ ಕೂಡ ಕಿರುಕುಳ ನೀಡುತ್ತಿದ್ದು, ಕೆಲಸ ನಿರ್ವಹಿಸಲು ಸಮಸ್ಯೆಯಾಗುತ್ತಿದೆ. ಆತನ ವಿರುದ್ಧ ಕಾನೂನು‌ಕ್ರಮ ಕೈಗೊಳ್ಳಬೇಕು. ಮುಖ್ಯಾಧಿಕಾರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಬಳಿಕ ಕೆಲಸ ಆರಂಭಿಸಲಿದ್ದೇವೆ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here