ಬೆಳ್ಳಾರೆ : ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಕರೆ

0

 

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರನ ಬಂಧನ

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರನೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಅವಾಚ್ಯ ಶಬ್ದಗಳಿಂದ ನಿಂದಿಸಿ ಹಿಂದೂ ಕಾರ್ಯಕರ್ತ ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಕಾರ್ಯಕರ್ತರು ನೆರೆದಿದ್ದರು. ಈ ಹಿನ್ನೆಲೆಯಲ್ಲಿ ಸಫ್ರಿದ್ ಎಂಬವವನನ್ನು ಬಜ್ಪೆಯಲ್ಲಿ ಪೊಲೀಸರು ಬಂಧಿಸಿದ್ದು, ಈತನ ನ್ನು ಬೆಳ್ಳಾರೆ ಠಾಣೆಗೆ ಕರೆತಂದಿರುವುದಾಗಿ  ತಿಳಿದು ಬಂದಿದೆ.

 

LEAVE A REPLY

Please enter your comment!
Please enter your name here