ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ನ 2021-22 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಜ.21 ರಂದು ಬೆಳಿಗ್ಗೆ ಕೆಯ್ಯೂರು ದೇವಿನಗರ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿಯವರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಅರ್ಜಿಯನ್ನು ಭರ್ತಿ ಮಾಡಿ ಗ್ರಾಮಸಭೆಯಲ್ಲಿ ನೀಡುವುದು, ಯಾವುದೇ ಯೋಜನೆಗಳಿಗೆ ಅರ್ಜಿ ಸಲಿಸುವ ಫಲಾನುಭವಿಗಳು ಗ್ರಾಮ ಸಭೆಯಲ್ಲಿಯೇ ಅರ್ಜಿಯನ್ನು ನೀಡತಕ್ಕದ್ದು ಅರ್ಹ ಪ್ರಯೋಜನಾರ್ಥಿಗಳನ್ನು ಸರಕಾರದ ನಿಯಾಮವಳಿಯಂತೆ ಗುರುತಿಸಲಾಗುವುದು, ಗ್ರಾಮದ ಎಲ್ಲಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿ, ಅಭಿವೃದ್ಧಿ ಅಧಿಕಾರಿ ಸುಬ್ರಹ್ಮಣ್ಯ ಕೆ.ಎಂ, ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಉಪಾಧ್ಯಕ್ಷ ಗಿರಿಜ ಕೆ ಹಾಗೂ ಸರ್ವ ಸದಸ್ಯರುಗಳ ಪ್ರಕಟಣೆ ತಿಳಿಸಿದೆ. ಗ್ರಾಮಸಭೆಯ ಮೊದಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2022-23 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸುವ ವಿಶೇಷ ಗ್ರಾಮಸಭೆ ನಡೆಯಲಿದೆ ಎಂದು ಗ್ರಾಪಂ ಪ್ರಕಟಣೆ ತಿಳಿಸಿದೆ.