ನಡುಗಲ್ಲು, ಹಾಲೆಮಜಲು ಮತ್ತು ಮೆಟ್ಟಿನಡ್ಕ ಪ್ರಗತಿಬಂಧು – ಸ್ವಸಹಾಯ ಸಂಘ ಒಕ್ಕೂಟಗಳ ಪದಗ್ರಹಣ

0

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುತ್ತಿಗಾರು ವಲಯದ ನಡುಗಲ್ಲು, ಹಾಲೆಮಜಲು ಮತ್ತು ಮೆಟ್ಟಿನಡ್ಕ ಪ್ರಗತಿಬಂಧು – ಸ್ವಸಹಾಯ ಸಂಘ ಒಕ್ಕೂಟಗಳ ಪದಗ್ರಹಣ ಸಮಾರಂಭ ಸೆ.10 ರಂದು ಶ್ರೀ ವೆಂಕಟೇಶ್ವರ ಸಭಾಭವನ ಹಾಲೆಮಜಲು ಇಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಎರ್ಧಡ್ಕ ರವರು ವಹಿಸಿದ್ದರು. ಪದಗ್ರಹಣ ಸಮಾರಂಭವನ್ನು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಮಾವಿನಕಟ್ಟೆರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ಪದಾಧಿಕಾರಿಗಳಿಗೆ ಜವಾಬ್ದಾರಿ ಮತ್ತು ದಾಖಲಾತಿ ಹಸ್ತಾಂತರವನ್ನು ದಕ್ಷಿಣ ಕನ್ನಡ ಜಿಲ್ಲಾ 2 ರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ನ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಮಾಡಿದರು.

ಧರ್ಮಸ್ಥಳ ಯೋಜನೆಯಿಂದ ರೈತರು ಬೆಳೆದು ಬಂದ ದಾರಿ ಬಗ್ಗೆ, ಕ್ಷೇತ್ರದ ಪರಿಚಯದ ಬಗ್ಗೆ, ಯೋಜನೆಯ ಹಲವಾರು ಕಾರ್ಯಕ್ರಮಗಳ ಬಗ್ಗೆ
ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಜನಜಾಗೃತಿ ಸದಸ್ಯರಾದ ವಿಜಯಕುಮಾರ್ ಚಾರ್ಮತ, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರಾದ ಡಾ| ಚೈತ್ರಾಭಾನು ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು, ವೈದ್ಯಾಧಿಕಾರಿಯವರನ್ನು, ಆಶಾ ಕಾರ್ಯಕರ್ತೆಯರನ್ನು ಸನ್ಮಾನ ಮಾಡಲಾಯಿತು. ಜನಮಂಗಲ ಕಾರ್ಯಕ್ರಮದಲ್ಲಿ ಮಂಜೂರು ಆದ ವಿಕಲಚೇತಕರಿಗೆ ಸಾಮಗ್ರಿಯನ್ನು ವಿತರಣೆ ಮಾಡಲಾಯಿತು. ಪದಗ್ರಹಣ ಸಮಾರಂಭದ ಆರಂಭದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು.
ಸಮಾರಂಭದಲ್ಲಿ ಒಕ್ಕೂಟಗಳ ನಿಕಟ ಪೂರ್ವ ಅಧ್ಯಕ್ಷರು ಮತ್ತು ನಿಕಟಪೂರ್ವ ಪದಾಧಿಕಾರಿಗಳು, ನೂತನ ಅಧ್ಯಕ್ಷರು ಮತ್ತು ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಊರಿನ ಗಣ್ಯರು, ಜನಪ್ರತಿನಿಧಿಗಳು, ಎಲ್ಲಾ ಭಜನಾ ಮಂಡಳಿಯ ಪದಾಧಿಕಾರಿಗಳು, ಜನಜಾಗೃತಿಯ ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು, ಒಕ್ಕೂಟದ ಸಂಘಗಳ ಪ್ರತಿನಿಧಿಗಳು ಮತ್ತು ಸದಸ್ಯರು, ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡರು ಸ್ವಾಗತಿಸಿ, ನಾಲ್ಕೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಹರಿಶ್ಚಂದ್ರ ಕುಳ್ಳಂಪಾಡಿ ವರದಿ ವಾಚಿಸಿದರು. ಮೆಟ್ಟಿನಡ್ಕ ಸೇವಾಪ್ರತಿನಿಧಿ ರಮೇಶ್ ಧನ್ಯವಾದ ಮಾಡಿದರು. ನಾಲ್ಕೂರು ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ ಕಾರ್ಯಕ್ರಮ ನಿರೂಪಿಸಿದರು.

 

 

 

 

 

LEAVE A REPLY

Please enter your comment!
Please enter your name here