ಕೊಳ್ತಿಗೆ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಆರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಜ.20 -23 ಜಾತ್ರಾ ಸಂಭ್ರಮ

ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ.20 ರಿಂದ ಆರಂಭಗೊಂಡು ಜ.23 ರವರೇಗೆ ವಿಜೃಂಭಣೆಯಿಂದ ಜರಗಲಿದೆ. ಜ.20 ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ ನಡೆದು ಭಕ್ತಾಧಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ರಾತ್ರಿ ಲಕ್ಷದೀಪೋತ್ಸವ ಹಾಗೂ ದೊಡ್ಡ ರಂಗಪೂಜೆ ನಡೆಯಿತು. ಜ.21 ರಂದು ಬೆಳಿಗ್ಗೆ ಆಶ್ಲೇಷ ಬಲಿಪೂಜೆ, ನಾಗನ ಕಟ್ಟೆಯಲ್ಲಿ ಕಲಶಾಭಿಷೇಕ,ತಂಬಿಲ ಸೇವೆ, ಶ್ರೀ ಮಹಾವಿಷ್ಣು ಆರಾಧನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ದುಗ್ಗಳದಿಂದ ಶ್ರೀ ಉಳ್ಳಾಕ್ಲು ದೈವದ ಭಂಡಾರವು ನಾಲಕದಿಂದ ಶ್ರೀ ರಾಜನ್ ದೈವ (ಶಿರಾಡಿ)ದ ಭಂಡಾರವು ಹೊರಟು ಶ್ರೀ ದೇವರ ಸನ್ನಿಧಿಗೆ ಆಗಮಿಸುವುದು, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕ್ಕಿ ಉತ್ಸವ, ಕಟ್ಟೆಪೂಜೆ, ಅಶ್ವತ್ಥ ಕಟ್ಟೆಪೂಜೆ, ಪ್ರಸಾದ ವಿತರಣೆ, ಭಕ್ತಾಧಿಗಳಿಂದ ಅನ್ನಸಂತರ್ಪಣೆ ನಡೆಯಲಿದೆ. ಜ.22 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ ವಿತರಣೆ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈಧಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಮಧ್ಯಾಹ್ನ ೨ ಕ್ಕೆ ಇರ್ವೆರು ಉಳ್ಳಾಕ್ಲುರವರ ಭಂಡಾರ ದುಗ್ಗಳಕ್ಕೆ ನಿರ್ಗಮನ, ರಾತ್ರಿ ರಂಗಪೂಜೆ, ವ್ಯಾಘ್ರ ಚಾಮುಂಡಿ, ವಾರಾಹಿ ದೈವದ ನೇಮ, ಕಾಣಿಕೆ ಹರಕೆ ಸಮರ್ಪಣೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಜ.23 ರಂದು ಬೆಳಿಗ್ಗೆ ಶ್ರೀ ರಕ್ತೇಶ್ವರಿ, ಧೂಮ್ರ ಧೂಮಾವತಿ ಮತ್ತು ಶಿರಾಡಿ ದೈವಗಳ ನೇಮ ನಡಾವರಿ, ಕಾಣಿಕೆ ಹರಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ
ಜ.20 ರಂದು ಸಂಜೆ ಸಂಪಂಗೋಡು ವಿಘ್ನರಾಜ್ ಬೆಂಗಳೂರು ಮತ್ತು ಕಾಂಚನ ಈಶ್ವರ ಭಟ್ ಬಳಗದವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಜ.21 ರಂದು ವಿವಿಧ ಭಜನಾ ತಂಡಗಳಿಂದ ಸಂಜೆ ಭಜನೆ ಮತ್ತು ಕುಣಿತ ಭಜನೆ ನಡೆಯಲಿದೆ.

ಭಕ್ತಾಧಿಗಳು ಸರಕಾರದ ಕೋವಿಡ್ 19 ನಿಯಮಗಳ ಪಾಲನೆಯೊಂದಿಗೆ ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನೇಮಿರಾಜ ಪಾಂಬಾರು, ಉತ್ಸವ ಸಮಿತಿ ಅಧ್ಯಕ್ಷ ತೀರ್ಥಾನಂದ ಗೌಡ ದುಗ್ಗಳ ಹಾಗೂ ವ್ಯವಸ್ಥಪಾ ಸಮಿತಿ ಸದಸ್ಯರುಗಳು, ಉಪಸಮಿತಿಗಳ ಸದಸ್ಯರು, 1 ಕವಳೆ, 4 ಸ್ಥಳಮನೆ ಮತ್ತು 16 ಬಾರಿಕೆ ಮನೆತನಗಳ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.