ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

0

 

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರುಗಳಿಗೆ ಸನ್ಮಾನ

 

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 10 ರಂದು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲರವರು ಭಾಗವಹಿಸಿ ಶುಭ ಹಾರೈಸಿದರು. ನಿಕಟಪೂರ್ವ ಅಧ್ಯಕ್ಷ ಆನಂದ ಪೂಜಾರಿ ವೇದಿಕೆಯಲ್ಲಿದ್ದರು.

 

ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಯೋಗೀಶ್ ಚಿದ್ಗಲ್, ಮಾಯಿಲಪ್ಪ, ರೇವತಿ ಕೊಡಿಪ್ಪಾಡಿ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಕರುಗಳಾಗಿ ಸೇವೆ ಸಲ್ಲಿಸುತ್ತಿರುವ ಲಯನ್ಸ್ ಕ್ಲಬ್ ನ ಸದಸ್ಯರನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನರೇಂದ್ರ ರೈ ದೇರ್ಲ ರವರನ್ನು ಪ್ರೊ. ಬಾಲಚಂದ್ರ ಗೌಡರು ಗೌರವಿಸಿದರು.


ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷೆ ರೂಪಶ್ರೀ ಜೆ.ರೈ ಸ್ವಾಗತಿಸಿ, ಕೋಶಾಧಿಕಾರಿ ಡಾ.ಲಕ್ಷ್ಮೀಶ ವಂದಿಸಿದರು. ಕಾರ್ಯದರ್ಶಿ ದೀಪಕ್ ಕುತ್ತಮೊಟ್ಟೆ ವರದಿ ವಾಚಿಸಿದರು.

ಗೀತಾ ಶಶಿಧರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಲೀಲಾ ದಾಮೋದರ್ ಹಾಗೂ ರಾಜೀವಿ ಹರೀಶ್ ರೈ ಸಹಕರಿಸಿದರು.

LEAVE A REPLY

Please enter your comment!
Please enter your name here