ರಾಮಕುಂಜ ಪ.ಪೂ.ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

0


ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಜ.19ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪಶುವೈದ್ಯೆ ಡಾ.ಅಪರ್ಣ, ಇಲೆಕ್ಟ್ರಿಕಲ್ ಗುತ್ತಿಗೆದಾರರ ಸುರೇಶ್‌ರವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು. ಬಳಿಕ ಮಾತನಾಡಿದ ಡಾ.ಅಪರ್ಣರವರು, ನಾಯಕತ್ವ ಸರಿಯಾಗಿದ್ದಾಗ ತಂಡ ಸಮರ್ಪಕವಾಗಿ ಕೆಲಸ ನಿರ್ವಹಿಸಲು ಸಾಧ್ಯ. ನಾವು ಮಾಡುವ ಕೆಲಸಗಳು ಜನರನ್ನು ಮುಟ್ಟುವಂತಿರಬೇಕು. ಸಣ್ಣ ಕೆಲಸವನ್ನು ಸರಿಯಾಗಿ ಮಾಡಿದಾಗ ಸಾಧನೆ ಮಾಡಬಹುದು ಎಂದು ಹೇಳಿ ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡರು. ಇನ್ನೋರ್ವ ಅತಿಥಿ ಸುರೇಶ್‌ರವರು ಮಾತನಾಡಿ, ಸೋಲು ಗೆಲುವು ಜೀವನದಲ್ಲಿ ನಿರಂತರ. ಜೀವನದಲ್ಲಿ ಕಷ್ಟಪಟ್ಟರೆ ಸಾಧನೆ ಮಾಡಬಹುದು. ನಾವು ಮಾಡುವ ಕೆಲಸದಲ್ಲಿ ಪ್ರಾಮಾಣಿಕರಾಗಿರಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಅತಿಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.


ಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್‌ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಶಿಕ್ಷಕಿ ಸುಪ್ರಿತಾ ಸ್ವಾಗತಿಸಿ, ಶಿಕ್ಷಕ ವಿಘ್ನೇಶ್ ವಂದಿಸಿದರು. ಶಾಲಾ ಶಿಕ್ಷಕ ರುದ್ರನಾಯ್ಕ್ ಟಿ ನಿರೂಪಿಸಿದರು. ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here