ಪುತ್ತೂರು: ಸರಿಸುಮಾರು 380 ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.23ರಿಂದ 25ರ ತನಕ ಮಣ್ಣಾಪು ಶ್ರೀ ಕ್ಷೇತ್ರದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ.
ಜ.23 ರಂದು ಬೆಳಿಗ್ಗೆ 7ಕ್ಕೆ ಸಾಮೂಹಿಕ ಪ್ರಾರ್ಥನೆ, 9ಗಂಟೆಗೆ ಗಣಹೋಮ, 11 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದೇವರ ಅರ್ಚಕರ ನೇತೃತ್ವದಲ್ಲಿ ಜರಗಲಿದ್ದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಜ.24 ರಂದು ಮಧ್ಯಾಹ್ನ 12.30ಕ್ಕೆ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಕಾಲಾವಧಿ ತಂಬಿಲ ನಡೆಯಲಿದೆ. ಜ.25 ರಂದು ಮಧ್ಯಾಹ್ನ ಭಜನಾ ೧ ಗಂಟೆಯಿಂದ ಭಜನಾ ಕಾರ್ಯಕ್ರಮ, ಸಂಜೆ 6.30 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 7.30 ಗಂಟೆಗೆ ಕೊರಗಜ್ಜ ದೈವದ ಭಂಡಾರ ತೆಗೆಯುವುದು ಹಾಗೂ ಶ್ರೀ ದೈವಕ್ಕೆ ಎಣ್ಣೆ ಕೊಡುವುದು, ರಾತ್ರಿ 8.30ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಬಳಿಕ ಅನ್ನ ಸಂತರ್ಪಣೆ ಜರಗಲಿದೆ.
ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರುರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಖ್ಯಾತ ಕ್ಯಾನ್ಸರ್ ತಜ್ಞ ಡಾ.ರಘು ಬೆಳ್ಳಿಪ್ಪಾಡಿ, ಡಾ.ನವೀನ್ ಕುಮಾರ್ ಮರಿಕೆ ಸಿಂಗಾರ-ಆರ್ಯಾಪು, ಉದ್ಯಮಿ ರತ್ನಗಿರಿ ಮಹಾರಾಷ್ಟ್ರದ ಚಿತ್ತರಂಜನ್ ಶೆಟ್ಟಿ ನುಳಿಯಾಲು, ಗೌರವ ಉಪಸ್ಥಿತಿಯಾಗಿ ನಗರಸಭೆ ಸದಸ್ಯೆ ಶೈಲಾ ಪೈ, ಉದ್ಯಮಿ ಉಪೇಂದ್ರ ಬಲ್ಯಾಯ, ಸಂಪ್ಯ-ಆರ್ಯಾಪು ಗಿರಿಧರ ಗೌಡ ಆಮೆಮನೆರವರು ಭಾಗವಹಿಸಲಿದ್ದಾರೆ. ಸ್ವಾಗತ ಮತ್ತು ಪ್ರಸ್ತಾವನೆಯನ್ನು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರು ನಿರ್ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಪಾಲಿಂಜೆ ಶ್ರೀ ಮಹಾವಿಷ್ಣು ಮಹಿಳಾ ಭಜನಾ ಮಂಡಳಿ, ಮೊಟ್ಟೆತ್ತಡ್ಕ ಮಿಷನ್ಮೂಲೆ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ, ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಸ್ವಾಮಿ ಕೊರಗಜ್ಜ ಭಜನಾ ಮಂಡಳಿ, ಮರಾಠಿ ಯುವ ವೇದಿಕೆ ಭಜನಾ ತಂಡ, ಶ್ರೀ ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ಕಾರ್ಯಕ್ರಮ ಜರಗಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ…
ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದಲ್ಲಿ ಕಳೆದ ವರ್ಷ ಜೀರ್ಣೋದ್ಧಾರ ಹಾಗೂ ಮೂಲ ಶಿಲಾ ಪುನರ್ ಪ್ರತಿಷ್ಠೆ ಕಾರ್ಯವು ಯಶಸ್ವಿಯಾಗಿ ಜರಗಿದ್ದು, ಏಳು ಸಾವಿರಕ್ಕೂ ಮಿಕ್ಕಿ ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕ್ಷೇತ್ರದ ಮೂಲ ಕುತ್ತಾರ್ಪದವು ಆಗಿದ್ದು, ಸಂಪ್ರದಾಯ ಪ್ರಕಾರ ಕೊರಗಜ್ಜನ ಕಟ್ಟೆಯನ್ನು ಸಿಮೆಂಟ್ ಬಳಸದೆ ಕೆಂಪು ಕಲ್ಲು ಮತ್ತು ಲಾವಾ ಮರದ ತೊಗಟೆ ರಸಮಿಶ್ರಿತ ಮಣ್ಣು ಹಾಗೂ ಬೆಲ್ಲ ಸೇರಿಸಿ ನಿರ್ಮಾಣ ಮಾಡಲಾಗಿದೆ. ಈ ಮಣ್ಣಾಪು ಕ್ಷೇತ್ರದಲ್ಲಿ ಶ್ರೀಮಂತರಿಲ್ಲ ಬದಲಾಗಿ ಹೃದಯವಂತರು ಇದ್ದಾರೆ. ಯುವಕರೇ ಈ ಕ್ಷೇತ್ರದ ಶಕ್ತಿಯಾಗಿದ್ದು ಕೇವಲ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುವ ಇಲ್ಲಿನ ಕುಟುಂಬವಾಗಿದೆ. ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರದಲ್ಲಿ ನಡೆಯುವ ವಾರ್ಷಿಕ ನೇಮೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಕೊರಗಜ್ಜನ ಕೃಪೆಗೆ ಪಾತ್ರರಾಗಬೇಕು – ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಗೌರವಾಧ್ಯಕ್ಷರು, ಶ್ರೀ ಕ್ಷೇತ್ರ ಮಣ್ಣಾಪು
ಸನ್ಮಾನ..
ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಸಮಾಜಸೇವೆ ಮತ್ತು ಧಾರ್ಮಿಕ ಸೇವೆಯನ್ನು ಮಾಡುತ್ತಿರುವ ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.
-ಸಂಜೆ 6.30:ದೈವ ನರ್ತನದ ಶಾಶ್ವತ ಚಪ್ಪರ, ಪಾಕಸಾಲೆ, ಸಾರ್ವಜನಿಕ ಶೌಚಾಲಯ ಲೋಕಾರ್ಪಣೆ
-ಜ.22:ಹಸಿರುವಾಣಿ ನೀಡಲಿಚ್ಛಿಸುವವರು ಶನಿವಾರ ಮೊದಲು ಶ್ರೀ ಕ್ಷೇತ್ರಕ್ಕೆ ಒಪ್ಪಿಸತಕ್ಕದ್ದು.
–ಭಕ್ತಾಧಿಗಳಿಂದ ಅನ್ನದಾನಕ್ಕೆ ಬೇಕಾದ ಅಕ್ಕಿ, ತೆಂಗಿನಕಾಯಿ, ದವಸಧಾನ್ಯಗಳು, ತರಕಾರಿ, ಬಾಳೆಎಲೆ ಮೊದಲಾದುವುಗಳನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಲಾಗುವುದು.
-ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ ನಡೆಯಲಿರುವುದು.