ಕೆವಿಜಿ ಐಪಿಎಸ್ ನಲ್ಲಿ ಓಣಂ ಆಚರಣೆ

0

 

 

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸೆ.10ರಂದು ಓಣಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಪ್ರಾಂಶುಪಾಲ ಅರುಣ್ ಕುಮಾರ್ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಓಣಂ ಆಚರಣೆಯ ಮಹತ್ವವನ್ನು ತಿಳಿಸಿದರು. 9ನೇ ತರಗತಿಯ ವಿದ್ಯಾರ್ಥಿನಿಯರ ತಿರುವಾದ್ದಿರಾ ನೃತ್ಯವು ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತು.

ಕೆವಿಜಿ ಪ್ಲೇಹೋಂ ನಿಂದ ಹತ್ತನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು, ಪೂಕಳಂ ಹಾಕಿ ಓಣಂ ವಾತಾವರಣವನ್ನು ಸೃಷ್ಟಿಸಿದರು . ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ.ವಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ‘ವಿದ್ಯಾರ್ಥಿಗಳಲ್ಲಿ ವಿವಿಧ ಹಬ್ಬಗಳ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಬಹಳ ಮುಖ್ಯ ‘ ಎಂದು ಶುಭಹಾರೈಸಿದರು. ಈ ಕಾರ್ಯಕ್ರಮವನ್ನು 9ನೇ ತರಗತಿಯ ಮನ್ವಿತ್ ಮತ್ತು ಅನ್ವಿತಾ ನಿರೂಪಿಸಿದರು.

LEAVE A REPLY

Please enter your comment!
Please enter your name here