ಅವೈಜ್ಞಾನಿಕ ಹಂಪ್ಸ್‌ಗಳಿಂದ ಸಾರ್ವಜನಿಕರಿಗೆ ತೊಂದರೆ: ಚಿಕ್ಕಮುಡ್ನೂರು ಕಲಿಯುಗ ಸಮಿತಿಯಿಂದ ನಗರಸಭಾ ಆಯುಕ್ತರಿಗೆ ಮನವಿ

0

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಕೆಲವು ಕಡೆ ಅಳವಾಡಿಸಲಾಗಿರುವ ಅವೈಜ್ಞಾನಿಕ ಹಂಪ್ಸ್‌ಗಳು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕ ಸಂಚಾರಕ್ಕೆ ಸುಗಮವಾದ ವ್ಯವಸ್ಥೆ ಕಲ್ಪಸಿಕೊಡಬೇಕೆಂದು ಚಿಕ್ಕಮುಡ್ನೂರು ಕಲಿಯುಗ ಸಮಿತಿ ವತಿಯಂದ ನಗರ ಸಭಾ ಆಯುಕ್ತರಿಗೆ ಮನವಿ ಮಾಡಲಾಗಿದೆ.

ಈಗಾಗಲೇ ಕೆಲವು ಕಡೆ ಹಂಪ್ಸ್‌ಗಳನ್ನು ಸರಿಯಾದ ರೀತಿಯಲ್ಲಿ ಆಳವಡಿಸಿದ್ದಾರೆ. ಆದರೆ ಇನ್ನೂ ಕೆಲವೆಡೆ ಯಾವುದೇ ವೈಜ್ಞಾನಿಕ ಕ್ರಮಗಳಿಲ್ಲದೆ ಹಾಕಿರುವ ಹಂಪ್ಸ್‌ಗಳಿಂದಾಗಿ ದ್ವಿಚಕ್ರ ವಾಹನ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಹಂಪ್ಸ್‌ಗಳಿಗೆ ಬಣ್ಣ ಹಾಗೂ ರಿಪ್ಲೆಕ್ಟರ್‌ಗಳನ್ನು ಅಳವಡಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರೂ ಇದನ್ನು ಕಾರ್ಯಗತಗೊಳಿಸಲಿಲ್ಲ. ಈ ಕುರಿತಾಗಿ ಹಿಂದೆ ಹಲವು ಮನವಿಯನ್ನು ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಪ್ರತಿಕ್ರಿಯೆಗಳಿಲ್ಲದ ಕಾರಣ ಪುನಃ ಇದರ ಕುರಿತಾಗಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here