ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗಡೆ ಬನ್ನಿ: ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

0

ಪುತ್ತೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ತೆರವಾಗಿದೆ. ಆದರೆ ವೀಕೆಂಡ್ ಕರ್ಫ್ಯೂ ತೆರವಾಗಿದ್ದರೂ ಅಗತ್ಯದ ಕೆಲಸಗಳಿದ್ದರೆ ಮಾತ್ರ ಮನೆಯಿಂದ ಹೊರಗಡೆ ಬನ್ನಿ,. ಮಾಸ್ಕ್ ಧರಿಸಿಕೊಳ್ಳಿ. ಅನಾವಶ್ಯಕವಾಗಿ ಜನಸಂದಣಿ ಇರುವ ಪ್ರದೇಶಗಳಿಗೆ ಹೋಗಬಾರದು ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಹೇಳಿದ್ದಾರೆ.

`ಸುದ್ದಿ’ಯ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಯಾರಿಗಾದರೂ ರೋಗಲಕ್ಷಣಗಳಿದ್ದರೆ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕು. ನಮ್ಮ ಜಿಲ್ಲೆ ಪ್ರಥಮ ಡೋಸ್ ಲಸಿಕೆ ಪಡೆಯದವರ ಪೈಕಿ ರಾಜ್ಯದಲ್ಲೇ ಮೊದಲನೇ ಸ್ಥಾನದಲ್ಲಿದೆ. ಆರೋಗ್ಯ ಇಲಾಖೆ, ಪಂಚಾಯತ್‌ಗಳು, ಸ್ಥಳೀಯ ಸಂಸ್ಥೆಗಳು, ಕಂದಾಯ ಇಲಾಖೆ ಅಧಿಕಾರಿಗಳು ಮನೆಗೆ ಬಂದಾಗ ಅರ್ಹವಾದವರು ಲಸಿಕೆ ಹಾಕಿಸಿಕೊಳ್ಳಬೇಕು. ಮುಂದಕ್ಕೆ ಲಾಕ್‌ಡೌನ್, ವೀಕೆಂಡ್ ಕರ್ಫ್ಯೂ ಬಾರದಂತೆ ತಡೆಯಲು ಲಸಿಕೆಯೊಂದೇ ದಾರಿ. ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲಾಡಳಿತವು ಮುಂದಿನ ರಿಲ್ಯಾಕ್ಸೇಷನ್ ಮಾಡುವ ಜೊತೆಗೆ ಮುಂದಿನ ಸೋಮವಾರ, ಮಂಗಳವಾರ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು, ತಜ್ಞರ ಸಮಿತಿಯ ಸಭೆ ಕರೆದು, ಶಾಲೆಗಳ ಬಗ್ಗೆ ಮತ್ತು ಇನ್ನಿತರ ನಿಯಮಗಳನ್ನು ಹೇರುವ ಬಗ್ಗೆ ಚರ್ಚೆ ಮಾಡುತ್ತೇವೆ. ಜೊತೆಗೆ ಜನಪ್ರತಿನಿಧಿಗಳು ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಕರೆದು ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ. ಕಾರ್ಯಕ್ರಮಗಳಿಗೆ ಕುರಿತಂತೆ ಇರುವ ನಿರ್ಬಂಧಗಳು ಯಥಾಸ್ಥಿತಿ ಮುಂದುವರೆಯುತ್ತದೆ.

ಗಣರಾಜ್ಯೋತ್ಸವವು ರಾಷ್ಟ್ರೀಯ ಕಾರ್ಯಕ್ರಮವಾಗಿರುವುದರಿಂದ ಕೋವಿಡ್ ಮಾರ್ಗಸೂಚಿಗಳ ಪಾಲನೆಯ ಜೊತೆಗೆ ಮಾಡಲು ಅವಕಾಶವಿದೆ. ಕೌಟುಂಬಿಕ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಕೆಲವೊಂದು ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ್‌ಗಳು, ಸ್ಥಳೀಯ ಸಂಸ್ಥೆಗಳು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕೆನ್ನುವ ಷರತ್ತಿಗೊಳಪಟ್ಟು ಅನುಮತಿ ನೀಡಿದರೆ ನಡೆಸಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

LEAVE A REPLY

Please enter your comment!
Please enter your name here