ಜ.25,26: ಶಿರಾಡಿ ಕಳಪ್ಪಾರು ಮೂಲಸ್ಥಾನ ಶಿರಾಡಿ, ರುದ್ರಾಂಡಿ, ಪರಿವಾರ ದೈವಗಳ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ

0

 

ನೆಲ್ಯಾಡಿ: ಶಿರಾಡಿ ಗ್ರಾಮದ ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮತ್ತು ಮೂಲಸ್ಥಾನ ಶಿರಾಡಿ ದೈವಸ್ಥಾನದ ಶ್ರೀ ಶಿರಾಡಿ, ರುದ್ರಾಂಡಿ ಹಾಗೂ ಪರಿವಾರ ದೈವಗಳ ಶ್ರೀ ಮಾಲ್ಯ ಚಾವಡಿಯಲ್ಲಿ ದೈವಗಳ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜ.25 ಮತ್ತು 26ರಂದು ನಡೆಯಲಿದೆ ಎಂದು ಅನುವಂಶಿಕ ಮೊಕ್ತೇಸರ ಬಾಲಕೃಷ್ಣ ಗೌಢ ಕೆ.ಸಿ., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿವಾಕರ ಗೌಡ ಶಿರಾಡಿ, ಆಡಳಿತ ಸಮಿತಿ ಅಧ್ಯಕ್ಷ ಡೊಂಬಯ್ಯ ಗೌಡ ಕೆ., ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್.ಪೆಲತ್ತಡಿ ಹಾಗೂ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಆದಿಚುಂಚನಗಿರಿ ಮಹಾ ಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ದೈವಗಳ ಚಾವಡಿಯ ಜೀರ್ಣೋದ್ದಾರ ಕೆಲಸ ನಡೆದಿದೆ. ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಜ.೨೫ರಂದು ಸಂಜೆ ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ರಾತ್ರಿ ದೇವತಾ ಪ್ರಾರ್ಥನೆ, ಆಚಾರ್ಯ ವರಣ, ಪ್ರಾಸಾದ ಪರಿಗ್ರಹ, ಸ್ವಸ್ತಿ ಪುಣ್ಯಾಹ ವಾಚನ, ಸ್ಥಳ ಶುದ್ಧಿ,ರಕ್ಷೆಘ್ನ ಹೋಮ, ವಾಸ್ತುಹೋಮ, ವಾಸ್ತು ಪೂಜಾ ಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಜ.೨೬ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಆಶ್ಲೇಷ ಬಲಿ, ಬ್ರಹ್ಮಕಲಶ ಪೂಜೆ ನಡೆದು ೮.೨೯ರ ನಂತರ ೯.೧೫ರ ಕುಂಭ ಲಗ್ನ ಮುಹೂರ್ತದಲ್ಲಿ ಶಿರಾಡಿ ದೈವ, ರುದ್ರಾಂಢಿ ದೈವ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here