ಸೆಂಟ್ಯಾರು ಶಾಲೆಯಲ್ಲಿ ಶಾಲಾ ಜವಾಬ್ದಾರಿ ಕುರಿತು ಮಾಹಿತಿ

0

ಪುತ್ತೂರು: ಅಸಹಾಯಕರ ಸೇವಾ ಟ್ರಸ್ಟ್ ಪುತ್ತೂರು ವತಿಯಿಂದ ಸೆಂಟ್ಯಾರು ಶಾಲೆಯಲ್ಲಿ ಎಸ್ಡಿಎಂಸಿ ಸದಸ್ಯರಿಗೆ ಹಾಗೂ ಮಕ್ಕಳ ಪೋಷಕರಿಗೆ ಶಾಲಾ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯೆ  ರೋಹಿಣಿ ರಾಘವ ಆಚಾರ್ಯರವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಅಸಹಾಯಕರ ಸೇವಾ ಟ್ರಸ್ಟ್ ಪುತ್ತೂರು ಅಧ್ಯಕ್ಷೆ  ನಯನ ರೈ ವಿಶೇಷ ಅಗತ್ಯವುಳ್ಳ ಮಕ್ಕಳ ಪೋಷಣೆಯ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೆಂಟ್ಯಾರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಬಾಬು ಮರಿಕೆ, ಉಪಾಧ್ಯಕ್ಷೆ ಸಂಧ್ಯಾ.ಕೆ. ಮರಿಕೆ, ಶಿಕ್ಷಣ ಸಂಪನ್ಮೂಲ ಕೇಂದ್ರದ ಕಾರ್ಯದರ್ಶಿ ಅಂಬಿಕ ರಮೇಶ್, ನೆಲ್ಲಿಕಟ್ಟೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪಂಚಾಕ್ಷರಿ, ಗೀತಾ ವಿಜಯ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರುಗಳಾದ ಜಾನಕಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ವಿದ್ಯಾ.ಕೆ ವಂದಿಸಿದರು.

LEAVE A REPLY

Please enter your comment!
Please enter your name here