ಬೆಳಂದೂರು ಪ್ರ.ದ. ಕಾಲೇಜಿನಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

0

ಕಾಣಿಯೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾಕೋಶ, ಎನ್.ಎಸ್.ಎಸ್. ಮತ್ತು ರೆಡ್‍ಕ್ರಾಸ್ ಘಟಕ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಸ್ಪಂದನ ಮಂಗಳೂರು ಇವರ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪದ್ಮನಾಭ ಕೆ. ವಹಿಸಿದ್ದರು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪುತ್ತೂರು ತಾಲೂಕಿನ ಮೇಲ್ವಿಚಾರಕರು, ಬೆಂಗಳೂರು ನಿಮ್ಹಾನ್ಸ್ ಯುವಪರಿವರ್ತಕರಾದ ಶ್ರೀಕಾಂತ್ ಬಿರಾವೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಉದ್ಯೋಗ ಭರವಸಾ ಕೋಶದ ಸಂಚಾಲಕರಾದ ಡಾ. ರವಿಚಂದ್ರ ನಾಯ್ಕ ಪ್ರಾಸ್ತಾವಿಕ ನುಡಿಗಳೊಂದಿಗೆ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕಾಂತ್ ಬಿರಾವೂರವರನ್ನು ಪರಿಚಯಿಸಿದರು. ಕಾರ್ಯಾಗಾರದಲ್ಲಿ ಐಕ್ಯೂಎಸಿ ಸಂಚಾಕರಾದ ವೆಂಕಟೇಶ್ ಪ್ರಸನ್ನ, ಸ್ವಾಮಿ ಎಸ್., ಮಹಿಳಾ ಘಟಕದ ಸಂಚಾಲಕರಾದ ಮಮತ ಯು ಉಪಸ್ಥಿತರಿದ್ದರು. ತೃತೀಯ ಬಿ.ಎ ವಿದ್ಯಾರ್ಥಿನಿ ಶಹಾನಾಜ್ ಸ್ವಾಗತಿಸಿ, ತೃತೀಯ ಬಿ.ಕಾಂ.ನ ಯಶ್ಮಿತಾ ವಂದಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಪ್ರಜ್ಞಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here