ಮಾಣಿ: ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ  ಸಮವಸ್ತ್ರ ವಿತರಣೆ,  ತರಬೇತಿ ಕಾರ್ಯಾಗಾರ

0

ವಿಟ್ಲ: ಕೇಂದ್ರದಲ್ಲಿ ಆಡಳಿತ ನಡೆಸಿದ್ದ ಡಾ.ಮನಮೋಹನ್ ಸಿಂಗ್ ನೇತ್ರತ್ವದ ಸರಕಾರ ಜಾರಿಗೆ ತಂದ ಸರ್ವಶಿಕ್ಷಣ ಅಭಿಯಾನ ಯೋಜನೆಯಿಂದ ಸರಕಾರಿ ಶಾಲೆಗಳಿಗೆ ದೊಡ್ಡ ಪ್ರಮಾಣದಲ್ಲಿ ಮೂಲಭೂತ ಸೌಕರ್ಯಗಳು ಸಿಗುವಂತಾಗಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಅವರು ಮಾಣಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮವಸ್ತ್ರ ವಿತರಣೆ ಮತ್ತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.   ಸರ್ಕಾರಿ ಶಾಲೆಗಳಲ್ಲಿ ಕಲಿತ ಅದೆಷ್ಟೋ ಮಂದಿ ಸಮಾಜದಲ್ಲಿ ಉನ್ನತ ಸ್ಥಾನಗಳಲ್ಲಿ ಗುರುತಿಸಿಕೊಂಡಿರುತ್ತಾರೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲರದ್ದಾಗಿದೆ ಎಂದು ಅವರು ಹೇಳಿದರು. ಸಹಶಿಕ್ಷಕ ನಾಗೇಶ್ ತರಬೇತಿಯನ್ನು ನಡೆಸಿಕೊಟ್ಟರು.  ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಪುಷ್ಪಲತಾ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here