ಐವರ್ನಾಡು ಗ್ರಾಮ ಪಂಚಾಯತ್ ಜಮಾಬಂಧಿ

0

ಐವರ್ನಾಡು ಗ್ರಾಮ ಪಂಚಾಯತ್ ನ 2021-22 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮವು ಸೆ.14 ರಂದು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.


ಪುತ್ತೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಕೃಷ್ಣ ಬಿ. ನೋಡೆಲ್ ಅಧಿಕಾರಿಯಾಗಿ ಜಮಾಬಂಧಿ ನಡೆಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಸಭಾಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸಿಬ್ಬಂದಿ ಪುರುಷೋತ್ತಮರವರು ವರದಿ ಮಂಡಿದರು. ಗ್ರಾಮಸ್ಥರು ಲೆಕ್ಕಪತ್ರಗಳ ಬಗ್ಗೆ ,ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.


ವೇದಿಕೆಯಲ್ಲಿ ಗ್ರಾಮ ಪಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಇಂಜಿನಿಯರ್ ಮಣಿಕಂಠ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿ, ವಂದಿಸಿದರು.

 

LEAVE A REPLY

Please enter your comment!
Please enter your name here