ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ಅರುಣ್ ಕಿರಿಮಂಜೇಶ್ವರಗೆ ಪ್ರಥಮ ಸ್ಥಾನ

0

 

ಪುತ್ತೂರು : ಬೆಂಗಳೂರಿನ ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಬಗ್ಗೆ ವಾರ್ಷಿಕ ಪ್ರಬಂಧ ಸ್ಪರ್ಧೆ 2021ನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲರು, ಅಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here