ಮಂಗಳೂರು ವಿ.ವಿ ಪುರುಷರ ದೇಹದಾರ್ಡ್ಯ ಸ್ಪರ್ಧೆ ಫಿಲೋಮಿನಾದ ಅಮೃತ್ ಎಸ್.ರೈ ದ್ವಿತೀಯ

0

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯ ಮತ್ತು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ನಡೆದ ಪುರುಷರ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ತೃತೀಯ ಬಿಬಿಎ ವಿಭಾಗದ ವಿದ್ಯಾರ್ಥಿ ಅಮೃತ್ ಎಸ್.ರೈ ಇವರು ೬೫ಕೆ.ಜಿ ವಿಭಾಗದಲ್ಲಿ ಮಂಗಳೂರು ವಿವಿ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಮಂಗಳೂರು ವಿವಿಗೆ ಆಧೀನವಾಗಿರುವ ಹೆಚ್ಚಿನ ಎಲ್ಲಾ ಕಾಲೇಜುಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದು, ದೇಹದಾರ್ಧ್ಯ ಸ್ಪರ್ಧೆಯಲ್ಲಿ ವಿಜೇತರಾದ ಅಮೃತ್ ಎಸ್.ರೈರವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ|ಆಂಟನಿ ಪ್ರಕಾಶ್ ಮೊಂತೆರೋ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋರವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here