ಒಳಮೊಗ್ರು ಗ್ರಾಪಂನಲ್ಲಿ ಗಣರಾಜ್ಯೋತ್ಸವ ಆಚರಣೆ, ಲಂಚ ಭ್ರಷ್ಟಾಚಾರ ಪ್ರತಿಕೃತಿ ದಹನ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನಲ್ಲಿ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿ ನಾಡಿನ ಜನತೆಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಸುದ್ದಿ ಜನಾಂದೋಲನ ವೇದಿಕೆ ಹಮ್ಮಿಕೊಂಡಿರುವ ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ ಎಂಬ ಆಂದೋಲನದ ಅಂಗವಾಗಿ ಲಂಚ ಭ್ರಷ್ಟಾಚಾರದ ಪ್ರತಿಕೃತಿ ದಹನ ಕಾರ್ಯಕ್ರಮ ನಡೆಯಿತು. ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರು ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ಲಂಚ ಭ್ರಷ್ಟಾಚಾರ ಮುಕ್ತ ಗ್ರಾಮ ನಮ್ಮದಾಗಬೇಕು ಎಂಬ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದ್ದೇವೆ. ಸುದ್ದಿ ಹಮ್ಮಿಕೊಂಡಿರುವ ಒಂದು ಒಳ್ಳೆಯ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು. ಅಭಿವೃದ್ಧಿ ಅಧಿಕಾರಿ ಅವಿನಾಶ್ ಮೇರ್ಲರವರು ಮಾತನಾಡಿ, ಲಂಚ ಭ್ರಷ್ಟಾಚಾರ ಮುಕ್ತ ತಾಲೂಕು ನಮ್ಮದಾಗಬೇಕು ಎಂಬ ನಿಟ್ಟಿನಲ್ಲಿ ಸುದ್ದಿ ಹಮ್ಮಿಕೊಂಡಿರುವ ಒಂದು ಒಳ್ಳೆಯ ಕಾರ್ಯಕ್ರಮ ಇದಾಗಿದೆ. ಇಂತಹ ಒಳ್ಳೆಯ ವಿಷಯದ ಬಗ್ಗೆ ಒಳ್ಳೆಯವರು ಮತ್ತು ಧೈರ್ಯ ಇರುವವರ ಮಾತ್ರ ಹೋರಾಟ ಮಾಡುತ್ತಾರೆ. ಕೆಟ್ಟ ವಿಷಯದ ವಿರುದ್ಧ ಹೋರಾಟ ಮಾಡಬೇಕಾದರೆ ಧೈರ್ಯ ಬೇಕು, ಲಂಚ ಭ್ರಷ್ಠಾಚಾರದ ವಿರುದ್ಧ ಉತ್ತರ ಭಾರತದಲ್ಲಿ ನಿರಂತರ ಹೋರಾಟ ಆಗುತ್ತಿರುತ್ತದೆ. ಲಂಚ ಭ್ರಷ್ಟಾಚಾರ ಮುಕ್ತ ಗ್ರಾಮವಾದರೆ ಸರಕಾರದ ಸೌಲಭ್ಯಗಳು ಜನರಿಗೆ ಸುಲಭವಾಗಿ ತಲುಪಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಒಳಮೊಗ್ರು ಗ್ರಾಪಂ ದಿಟ್ಟ ಹೆಜ್ಜೆಯನ್ನು ಇಡಲಿದೆ ಎಂದು ಹೇಳಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರುಗಳಾದ ಶೀನಪ್ಪ ನಾಯ್ಕ, ಮಹೇಶ್ ರೈ ಕೇರಿ, ಲತೀಪ್ ಕುಂಬ್ರ, ನಿಮಿತಾ, ಚಿತ್ರಾ ಬಿ.ಸಿ, ಶಾರದಾ, ಗ್ರಾಪಂ ಸಿಬ್ಬಂದಿಗಳಾದ ಜಾನಕಿ, ಗುಲಾಬಿ, ಕೇಶವ, ಗ್ರಂಥಪಾಲಕಿ ಸಿರಿನಾ, ಪೂವಯ್ಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here