ಕಿಲ್ಲೆ ಮೈದಾನದಲ್ಲಿ ತಾಲೂಕು ಮಟ್ಟದ ಗಣರಾಜ್ಯೋತ್ಸವ

0

ಪುತ್ತೂರು: ಕಿಲ್ಲೆ ಮೈದಾನದಲ್ಲಿ ತಾಲೂಕು ಮಟ್ಟದ ಗಣರಾಜ್ಯೋತ್ಸವ ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಿತು.

ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ ಜಿವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾಗೌರಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ರಮೇಶ್ ಬಾಬು, ಪೌರಾಯುಕ್ತ ಮಧು ಎಸ್ ಮನೋಹರ್, ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ, ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ಪುರಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.‌ ಸರಕಾರಿ ಕಾರ್ಯಕ್ರಮದ ಉದ್ಘೋಕ್ಷಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ಧ್ವಜಾರೋಹಣದ ಮೊದಲು ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಪುಷ್ಪರ್ಚಣೆ ಮಾಡಲಾಯಿತು.

LEAVE A REPLY

Please enter your comment!
Please enter your name here