ಕೊಳ್ತಿಗೆ ಗ್ರಾಪಂನಲ್ಲಿ ಗಣರಾಜ್ಯೋತ್ಸವ ಆಚರಣೆ, ಲಂಚ ಭ್ರಷ್ಟಾಚಾರ ಪ್ರತಿಕೃತಿ ದಹನ, ಪ್ರತಿಜ್ಞಾ ವಿಧಿ ಸ್ವೀಕಾರ

0

ಪುತ್ತೂರು: ಕೊಳ್ತಿಗೆ ಗ್ರಾಮ ಪಂಚಾಯತ್‌ನಲ್ಲಿ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಗ್ರಾಪಂ ಅಧ್ಯಕ್ಷ ಶ್ಯಾಮಸುಂದರ್ ರೈ ಧ್ವಜಾರೋಹಣ ಮಾಡುವ ಮೂಲಕ ಆಚರಿಸಿ ನಾಡಿನ ಜನತೆಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಸುದ್ದಿ ಜನಾಂದೋಲನ ವೇದಿಕೆ ಹಮ್ಮಿಕೊಂಡಿರುವ ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ ಎಂಬ ಆಂದೋಲನದ ಅಂಗವಾಗಿ ಲಂಚ ಭ್ರಷ್ಟಾಚಾರದ ಪ್ರತಿಕೃತಿ ದಹನ ಕಾರ್ಯಕ್ರಮ ನಡೆಯಿತು. ಗ್ರಾಪಂ ಅಧ್ಯಕ್ಷ ಶ್ಯಾಮ್‌ಸುಂದರ್ ರೈಯವರು ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ಲಂಚ ಭ್ರಷ್ಟಾಚಾರ ಮುಕ್ತ ಗ್ರಾಮ ನಮ್ಮದಾಗಬೇಕು ಎಂಬ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದ್ದೇವೆ. ಸುದ್ದಿ ಹಮ್ಮಿಕೊಂಡಿರುವ ಒಂದು ಒಳ್ಳೆಯ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಘೋಷಣೆ ಕೂಗಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ನಾಗವೇಣಿ, ಸದಸ್ಯೆ ಯಶೋಧಾ ಬಾಬು ರಾಜೇಂದ್ರ, ಮಾಜಿ ಸದಸ್ಯ ಉದಯ ಕುಮಾರ್ ಜಿ.ಕೆ, ಕಾರ್ಯದರ್ಶಿ ಶಾರದಾ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here