ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ

0

 

ಕಾವು: ಕಾವು ಬುಶ್ರಾ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆದ 73ನೇ ಗಣರಾಜ್ಯೋತ್ಸವದಲ್ಲಿ ಸಂಸ್ಥೆಯ ಅಧ್ಯಕ್ಷ ಬುಶ್ರಾ ಅಬ್ದುಲ್ ಅಝೀಜ್‌ರವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಸಂಸ್ಥೆಯ ಪಿಟಿಎ ಅಧ್ಯಕ್ಷ ಐ.ಸಿ ಕೈಲಾಸ್, ಮುಖ್ಯಗುರು ಅಮರನಾಥ ಬಿ.ಪಿರವರು ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚೆಗೆ ತುಡರ್ ಯುವಕ ಮಂಡಲದ ವತಿಯಿಂದ ನಡೆದ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ವಿವೇಕಾನಂದರ ಭಾವಚಿತ್ರದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಿಟಿಎ ಕೋಶಾಧಿಕಾರಿ ಬಶೀರ್ ಕೌಡಿಚ್ಚಾರ್, ಬದ್ರುದ್ಧಿನ್, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ನುಮಾ ಸಂಶುದ್ಧೀನ್ ಕಾರ್ಯಕ್ರಮ ನಿರೂಪಿಸಿ, ಮುಜಾಮಿಲ್ ಜಿ.ಕೆ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ಹಂಚಲಾಯಿತು.

LEAVE A REPLY

Please enter your comment!
Please enter your name here