ಸೆ.25- ಅ.4: ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸೆ.25 ರಿಂದ ಅ. 4ರವರೆಗೆ ನಡೆಯಲಿದ್ದು, ಅ‌.5ರಂದು ಮಹಾಸಂಪ್ರೋಕ್ಷಣೆ ನಡೆಯಲಿದೆ.
ಅ.25 ರಂದು ನವರಾತ್ರಿ ಪೂಜಾ ಪ್ರಾರಂಭಗೊಳ್ಳಲಿದೆ. ಪ್ರತಿದಿನ ಸಂಜೆ 6ರಿಂದ 7 ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 7ರಿಂದ 9ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅ.4 ರಂದು ಬೆಳಿಗ್ಗೆ ಆಯುಧಪೂಜೆಯ ಸಲುವಾಗಿ ವಾಹನಪೂಜೆ ನಡೆಯಲಿದೆ. ಅ.5ರಂದು ಬೆಳಿಗ್ಗೆ ಗಣಪತಿ ಹವನ,ಸೀಯಾಳಾಭಿಷೇಕ,ಮಕ್ಕಳಿಗೆ ಅಕ್ಷರಾಭ್ಯಾಸ, ಧಾರ್ಮಿಕ ಸಭಾ ಕಾರ್ಯಕ್ರಮ,ಮಧ್ಯಾಹ್ನ ಮಹಾಪೂಜೆ,ಮಹಾಸಂಪ್ರೋಕ್ಷಣೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಅ.5ರಂದು ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೆ‌.ವಿ.ಜಿ.ಅಮರಜ್ಯೋತಿ ಪ.ಪೂ‌‌‌.ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಜರಂಗದಳ ದಕ್ಷಿಣ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಾಸಂತಡ್ಕ, ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಭಾಗವಹಿಸಲಿದ್ದಾರೆ. ಎಡಮಂಗಲ ಗ್ರಾ‌.ಪಂ.ಅಧ್ಯಕ್ಷೆ ಶ್ರೀಮತಿ ಗೀತಾ ಪ್ರವೀಣ್,ಮುರುಳ್ಯ ಗ್ರಾ.ಪಂ.ಅಧ್ಯಕ್ಷೆ ಕು.ಜಾನಕಿ ಮುರುಳ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here