ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಪ್ರಧಾನಮಂತ್ರಿ ಮೋದಿಯವರ ಜನ್ಮದಿನ ಆಚರಣೆ

0

 

ಬಿಜೆಪಿ ಯುವಮೋರ್ಚಾ, ಸುಳ್ಯ ಮಂಡಲವತಿಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ 72ನೇ ಜನ್ಮದಿನ ಆಚರಣೆ ಪ್ರಯುಕ್ತ ಕಡಬದ ಶ್ರೀ ಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನುಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್, ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ, ದ.ಕ. ಜಿಲ್ಲಾ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಕೃಷ್ಣ ಎಂ.ಆರ್. ಹಾಗೂ ಯುವ ಮೋರ್ಚಾದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಕೇರ್ಪಳ ಸ್ವಾಗತಿಸಿ, ದಿಲೀಪ್ ಉಪ್ಪಳಿಕೆ ವಂದನಾರ್ಪಣೆ ಮಾಡಿದರು, ಪ್ರದೀಪ್ ಕೊಲ್ಲರಮೂಲೆ ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here