ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ವಿಶ್ವ ಪುಂಡಿತ್ತೂರು ನಿಧನ

0


ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದ ಬಲ್ನಾಡು ನಿವಾಸಿ ವಿಶ್ವ ಪುಂಡಿತ್ತೂರು(48ವ)ರವರು ಜ.27ರಂದು ಸಂಜೆ ತಮ್ಮ ನಿವಾಸದಲ್ಲಿ ನಿಧನರಾದರು.

ಪುಂಡಿತ್ತೂರು ದಿ.ಸುಬ್ಬಣ್ಣ ಭಟ್ ಅವರ ಪುತ್ರರಾದ ವಿಶ್ವ ಪುಂಡಿತ್ತೂರು ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದು, ಬಿಜೆಪಿ ಪಕ್ಷದಲ್ಲಿ ಗುರುತಿಸಿ ಕೊಂಡಿದ್ದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಿದ ಅವರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿ ಜವಾಬ್ದಾರಿ ನಿರ್ವಹಿಸಿದ್ದರು. ಬಳಿಕದ ದಿನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಬಳಿಕ ಮನೆಯಲ್ಲೇ ಆರೈಕೆ ಪಡೆಯುತ್ತಿದ್ದರು.   ಮೃತರು ಪತ್ನಿ ಅನುರಾಧ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here