ರಾಮಕುಂಜ ಮಹಾವಿದ್ಯಾಲಯದಲ್ಲಿ ರಸಪ್ರಸ್ನೆ ಸ್ಪರ್ಧೆ

0

  • ವಿಜ್ಞಾನದ ವಿದ್ಯಾರ್ಥಿಗಳು ಆವಿಷ್ಕಾರಿಗಳಾಗಬೇಕು – ಶ್ರೀ ಗಣರಾಜ ಕುಂಬ್ಳೆ

ರಾಮಕುಂಜ: ನಮ್ಮ ಪೂರ್ವಜರು ವೈಜ್ಞಾನಿಕ ಮನೋಭಾವವನ್ನು ಹೊಂದಿದ್ದರು. ವಿದ್ಯಾರ್ಥಿಗಳು ಬದುಕಿನ ಸಾಮಾನ್ಯ ವಿಷಯಗಳ ಬಗ್ಗೆ ವೈಜ್ಞಾನಿಕ ಅನ್ವೇಷಣೆ ಮಾಡಿ ಆವಿಷ್ಕಾರಿಗಳಾಗಿ ಎಂದು ಪ್ರಾಂಶುಪಾಲ ಗಣರಾಜ ಕುಂಬ್ಳೆ ಅವರು ತಿಳಿಸಿದರು.

ಅವರು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ವಿಜ್ಞಾನ ಸಂಘವು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸಾಮಾನ್ಯ ರಸಪ್ರಶ್ನೆ ಸ್ಪರ್ಧೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಉಪನ್ಯಾಸಕಿಯರಾದ ಶಂಕರಿ, ಭವ್ಯಶ್ರೀ, ಅನುಷಾ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಾಗೂ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಭಾಗವಹಿಸಿದರು. ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ತದನಂತರದಲ್ಲಿ ವಿಜ್ಞಾನ ಮಾದರಿ ಪ್ರದರ್ಶನವು ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು. ಧನಲಕ್ಷ್ಮಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಫಾತಿಮತ್ ಜೋಹಾರ ವಂದಿಸಿದರು.

LEAVE A REPLY

Please enter your comment!
Please enter your name here