ರಾಮಕುಂಜ ಆ.ಮಾ.ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ

0

 

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೭೩ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ರಾಷ್ಟ್ರಧ್ವಜಾರೋಹಣಗೈದು, ಸಂವಿಧಾನ ಶಿಲ್ಪಿ ಡಾ|ಬಿ.ಆರ್. ಅಂಬೆಡ್ಕರ್‌ರವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ಶಾಲಾ ಸಹಶಿಕ್ಷಕಿ ಜಯಲತಾರವರು ಗಣರಾಜ್ಯೋತ್ಸವ ದಿನದ ಆಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳಾದ ಚೈತನ್ಯ, ದಿನೇಶ್ , ಹರ್ಷಿತ್ ಎನ್ ಗೌಡ, ವಿನುತ್ ಎಂ, ವಿಶಾಲ್ ಬಿ ಭಾಷಣ ಮಾಡಿದರು. ಶಾಲಾ ಆಡಳಿತಾಧಿಕಾರಿ ಆನಂದ್ ಎಸ್.ಟಿ., ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಅಕ್ಷತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಹರ್ಷಿತ್ ಸಿ ಗೌಡ ಕಾರ್ಯಕ್ರಮ ನಿರೂಪಿಸಿದರು. ಯುಗಾಂತ್ ಸ್ವಾಗತಿಸಿ, ಶ್ರೀಶಾಂತ್ ಗೌಡ ವಂದಿಸಿದರು.

LEAVE A REPLY

Please enter your comment!
Please enter your name here