ಕಾಣಿಯೂರು ಹಾ.ಉ.ಸಹಕಾರ ಸಂಘದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಉದ್ಘಾಟನೆ

0

ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಂದಿನಿ ಬ್ರ್ಯಾಂಡ್‌ನ ಉತ್ಪನ್ನಗಳ ಉದ್ಘಾಟನೆಯನ್ನು ದ.ಕ ಜಿಲ್ಲಾ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್ ಉದ್ಘಾಟಿಸಿ ಶುಭಹಾರೈಸಿದರು. ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು ಮಾತನಾಡಿ, ಕಾಣಿಯೂರು ಹಾ.ಉ.ಸ.ಸಂಘದಲ್ಲಿ ನಂದಿನಿ ಬ್ರ್ಯಾಂಡ್‌ನ ಹಲವಾರು ರೀತಿಯ ತಿಂಡಿ ಮತ್ತು ಪಾನೀಯ ಉತ್ಪನ್ನಗಳನ್ನು ಮಾರಾಟ ಮಾಡಲು ಉದ್ದೇಶಿದ್ದು, ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ರಖಂ ದರದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು.

ದ.ಕ ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ನಾಗೇಶ್, ಸಂಘದ ಉಪಾಧ್ಯಕ್ಷ ರಾಜೇಶ್ ಮುಂಡಾಳ, ನಿರ್ದೇಶಕರಾದ ರಾಮಣ್ಣ ಗೌಡ ಮುಗರಂಜ, ರಾಜೇಶ್ ಮೀಜೆ, ಹೇಮಾವತಿ ಮುಗರಂಜ, ಸೀತಮ್ಮ ಅಜಿರಂಗಳ, ಪದ್ಮಯ್ಯ ಹೊಸೊಕ್ಲು, ಸಂಘದ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಗೌಡ, ಸಿಬ್ಬಂದಿಗಳಾದ ಚಂದ್ರಶೇಖರ ಬೈತಡ್ಕ, ಪುಷ್ಪಾವತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಂದಿನಿ ಬ್ರ್ಯಾಂಡ್‌ನ ಹಲವಾರು ರೀತಿಯ ತಿಂಡಿ ಮತ್ತು ಪಾನೀಯ ಉತ್ಪನ್ನಗಳನ್ನು ಮಾರಾಟ ಮಾಡಲು ಉದ್ದೇಶಿದ್ದು, ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ರಖಂ ದರದಲ್ಲಿ ವ್ಯವಸ್ಥೆ ಮಾಡಲಾಗುವುದು ರಾಮಣ್ಣ ಗೌಡ ಮೂಡೈಮಜಲು ಅಧ್ಯಕ್ಷರು, ಹಾ.ಉ.ಸ.ಸಂಘ ಕಾಣಿಯೂರು

LEAVE A REPLY

Please enter your comment!
Please enter your name here