ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಹಾಲು ಖರೀದಿ ದರ ಪ್ರತಿ ಲೀಟರ್‌ಗೆ ರೂ.1.00 ಹೆಚ್ಚಳ

0

ಪುತ್ತೂರು : ದ.ಕ.ಸಹಕಾರಿ ಹಾಲು ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಫೆ.01ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿನ ಖರೀದಿ ದರ ರೂ.1.00ರಂತೆ ಹೆಚ್ಚಳ ಮಾಡಲು ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ದೇಶದಾದ್ಯಂತ ಕೋವಿಡ್-೧೯ರ ಸಮಸ್ಯೆಯಿಂದಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಕಡಿಮೆಯಾಗಿ, ಒಕ್ಕೂಟದ ನಿರ್ವಹಣೆಗೆ ಸಂಪನ್ಮೂಲದ ಕೊರತೆಯಾದುದರಿಂದ ಹಾಲು ಉತ್ಪಾದಕರ ಖರೀದಿ ದರವನ್ನು ಕಡಿಮೆ ಮಾಡಲಾಗಿತ್ತು. ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿ ಚೇತರಿಸಿಕೊಂಡಿರುವುದರಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟವನ್ನು ಗಣನೆಗೆ ತೆಗೆದುಕೊಂಡು, ಒಕ್ಕೂಟದ ವ್ಯಾಪ್ತಿಯ ಹೈನುಗಾರರನ್ನು ಉತ್ತೇಜಿಸುವ ಉದ್ದೇಶದಿಂದ ಹಾಲಿನ ಖರೀದಿ ದರವನ್ನು ಪರಿಷ್ಕರಿಸಿ ಈಗಾಗಲೇ ನೀಡುತ್ತಿರುವ ಗುಣಮಟ್ಟದ ಪ್ರತಿ ಲೀಟರ್ ಹಾಲಿಗೆ ರೂ. 28.00ರಿಂದ ರೂ.1.00 ಹೆಚ್ಚಿಸಿ, ಹಾಲಿನ ಖರೀದಿ ದರ ರೂ.29.00ರಂತೆ ನಿಗದಿಪಡಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here