ಬೆಟ್ಟಂಪಾಡಿ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ , ಬಾಲವಿಕಾಸ ಸಮಿತಿ, ಅಂಗನವಾಡಿ ಕೇಂದ್ರ ಬೆಟ್ಟಂಪಾಡಿ ಇವುಗಳ ಆಶ್ರಯದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ, ಪೌಷ್ಟಿಕಾಹಾರ ಸಪ್ತಾಹ ಬೆಟ್ಟಂಪಾಡಿ ಅಂಗನವಾಡಿಯಲ್ಲಿ ಸೆ.16ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾಲಕ್ಷ್ಮಿ ವಹಿಸಿದ್ದರು.

ವೇದಿಕೆಯಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಹಾಜರಿದ್ದರು.

ಸಮುದಾಯ ಆರೋಗ್ಯಾಧಿಕಾರಿ ಶ್ರೀಮತಿ ತೇಜಶ್ರೀ ಆರೋಗ್ಯ ದ ಕುರಿತು ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರತಿಕುಮಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಮಿತಿಯ ಅಧ್ಯಕ್ಷರಾದ ಹಸ್ತಾ, ತಾಯಂದಿರು, ಅಂಗನವಾಡಿ ಕೇಂದ್ರದ ಪುಟಾಣಿಗಳು, ಅಂಗನವಾಡಿ ಸಹಾಯಕಿ ಶ್ರೀಮತಿ ಸುನಿತಾ, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here