ಸೈಂಟ್ ಜೋಸೆಫ್ ಪ್ರೌಢಶಾಲಾ ಬಾಲಕರು ವಿಭಾಗ ಮಟ್ಟಕ್ಕೆ

0

 

 

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಶಕ್ತಿನಗರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ 14 ವರ್ಷದೊಳಗಿನ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಎಂಟನೆಯ ವಿದ್ಯಾರ್ಥಿಗಳಾದ ಮಹಮದ್ ಫೈಜ್ ಹಾಗೂ ಅಮೃತ್ ಬಿಕೆ , ಸುಳ್ಯ ತಾಲೂಕನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here