ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಶಕ್ತಿನಗರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ 14 ವರ್ಷದೊಳಗಿನ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಎಂಟನೆಯ ವಿದ್ಯಾರ್ಥಿಗಳಾದ ಮಹಮದ್ ಫೈಜ್ ಹಾಗೂ ಅಮೃತ್ ಬಿಕೆ , ಸುಳ್ಯ ತಾಲೂಕನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .